ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಪಾಕಿಸ್ತಾನದಲ್ಲಿ ಅಭಿಯಾನ ಶುರುಮಾಡಿದೆ ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವನ್ನು ಕಿತ್ತುಹಾಕಲು, ಕಾಂಗ್ರೆಸ್ಸಿನ ಅಧಿಕೃತ ವೆಬ್‍ಸೈಟ್ ಮೂಲಕ `ದೇಶ್ ಬಚಾವೋ, ಮೋದಿ ಹಟವೋ’ ಫೇಸ್ಬುಕ್ ಜಾಹೀರಾತಿನ ಮೂಲಕ ಅಭಿಯಾನ ಕೈಗೊಂಡಿರುವ ಬಗ್ಗೆ ಟ್ವೀಟ್ ಮಾಡಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
Advertisement
Official Congress page sponsoring ads on Facebook in Pakistan to remove Modi! pic.twitter.com/F9hhMFEPzS
— Amit Malviya (@amitmalviya) October 18, 2018
Advertisement
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಕಾಂಗ್ರೆಸ್ಸಿನ ಹಿರಿಯ ನಾಯಕ ಮಣಿ ಶಂಕರ್ ಅಯ್ಯರ್ ಪ್ರಧಾನಿ ಮೋದಿಯವರ ವಿರುದ್ಧ ಪ್ರಚಾರ ಮಾಡಿದ್ದರೋ, ಅದೇ ರೀತಿ ಈಗ ಪಾಕಿಸ್ತಾನದ ಫೇಸ್ಬುಕ್‍ಗಳಲ್ಲಿ ಮೋದಿ ಹಠಾವೋ ಚಳುವಳಿಯನ್ನು ಆರಂಭಿಸಿದೆ. ಇದಲ್ಲದೇ ಕಳೆದ ಸೆಪ್ಟೆಂಬರಿನಲ್ಲಿ ಪಾಕಿಸ್ತಾನ ಸರ್ಕಾರ ಬಹಿರಂಗವಾಗಿ ರಾಹುಲ್ ಗಾಂಧಿ ಭಾರತದ ಮುಂದಿನ ಪ್ರಧಾನಿ ಎಂದು ಪ್ರಚಾರ ಮಾಡಿದೆ ಎಂದು ಆರೋಪಿಸಿದರು.
Advertisement
ಪ್ರಧಾನಿ ನರೇಂದ್ರ ಮೋದಿಯವರಿಗೆ ಪಾಕಿಸ್ತಾನಿ ನಾಯಕರೊಂದಿಗೆ ವೈರತ್ವವಿರುವ ಕಾರಣ, ಪಾಕಿಸ್ತಾನ ಕಾಂಗ್ರೆಸ್ಸನ್ನು ಬೆಂಬಲಿಸುತ್ತಿದೆ. ಅಲ್ಲದೇ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಪಾಕಿಸ್ತಾನಿ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಹೋಗಿದ್ದಲ್ಲದೇ, ಪಾಕಿಸ್ತಾನದ ಸೇನಾ ಮುಖ್ಯಸ್ಥರನ್ನು ಆಲಂಗಿಸುವ ಮೂಲಕ ದೇಶದ ಸೈನಿಕರಿಗೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದರು.
Advertisement
Video recording of Congress’s official page where it can be seen that they are running ‘मोदी हटाओ’ campaign in Pakistan. pic.twitter.com/yny5P2VVMN
— Amit Malviya (@amitmalviya) October 18, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv