ದಾವಣಗೆರೆ: ಮೂರು ಬಾರಿ ಲೋಕಸಭೆ ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್‍ನಿಂದ ಸ್ಪರ್ಧಿಸುವುದಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಮಾಜಿ ಸಚಿವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿ ಅವರು, ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಅಂತ ಎಲ್ಲಿಯೂ ಹೇಳಿಲ್ಲ. ಸ್ಕ್ರೀನ್ ಕಮಿಟಿಯಲ್ಲಿ ನಿರ್ಧಾರ ಮಾಡಿ ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
Advertisement
Advertisement
ಹೈಕಮಾಂಡ್ ಹಾಗೂ ರಾಜ್ಯ ನಾಯಕರು ನಮ್ಮ ಕುಟುಂಬದ ಸದಸ್ಯರೇ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. ಸ್ಪರ್ಧಿಸಲು ನನಗೆ ಅಭ್ಯಂತರವಿಲ್ಲ. ಎಲ್ಲಾ ಮುಖಂಡರು ಸಂಪರ್ಕದಲ್ಲಿದ್ದಾರೆ. ನೀವೇ ಆದರೂ ನಿಂತು ಗೆಲ್ಲಿ, ಇಲ್ಲ ನಿಮ್ಮ ಅಭ್ಯರ್ಥಿಯನ್ನಾದ್ರೂ ನಿಲ್ಲಿಸಿ ಗೆಲ್ಲಿಸಿ ಎಂದು ಹೈಕಮಾಂಡ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಸೋಮವಾರದ ಬಳಿಕ ಸ್ಕ್ರೀನ್ ಕಮಿಟಿ ಸಭೆ ಇದೆ. ಅಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv