ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Election) ಘೋಷಣೆ ಆಗಿದ್ದು, ಸದ್ಯದಲ್ಲೇ ಅಭ್ಯರ್ಥಿಗಳ ಕುರಿತು ಸಂಸದೀಯ ಮಂಡಳಿ ತೀರ್ಮಾನ ಮಾಡಲಿದೆ ಎಂದು ಬಿಜೆಪಿ (BJP) ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ರಾಜ್ಯದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭ್ಯರ್ಥಿಗಳ ಘೋಷಣೆಯಾದ ನಂತರ ಚುನಾವಣೆ ಮುಗಿಯುವವರೆಗೆ ರಾಜ್ಯದ ಎಲ್ಲ ಕ್ಷೇತ್ರಗಳಿಗೆ ನಾನು, ನಮ್ಮ ಸಂಸದರು ಪ್ರವಾಸ ಮಾಡಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಧಮ್ ಇದ್ರೆ ಡಿಕೆಶಿ ಮೀಸಲಾತಿ ನಿರ್ಧಾರವನ್ನು ವಾಪಸ್ ಪಡೆಯಲಿ – ಯತ್ನಾಳ್ ಸವಾಲ್
Advertisement
Advertisement
ಸೂರ್ಯ-ಚಂದ್ರರು ಇರುವುದು ಎಷ್ಟು ಸತ್ಯವೋ, ಅಷ್ಟೇ ಖಚಿತವಾಗಿ ನಾವು ಸ್ಪಷ್ಟ ಬಹುಮತದೊಂದಿಗೆ ಈ ಚುನಾವಣೆಯಲ್ಲಿ ಸರ್ಕಾರ ರಚಿಸುತ್ತೇವೆ. ನರೇಂದ್ರ ಮೋದಿಜಿ (Narendra Modi), ಅಮಿತ್ ಶಾಜಿ (Amit Shah) ಅವರಂತಹ ನಾಯಕರು ಬಿಜೆಪಿಯಲ್ಲಿದ್ದು, ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮಗಳಿಗೆ ದೇವದುರ್ಲಭ ಸ್ವಾಗತ ಲಭಿಸುತ್ತಿದೆ. 4 ತಂಡಗಳ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋ, ಸಾರ್ವಜನಿಕ ಸಭೆಗಳಲ್ಲಿ ಸೇರಿದ ಜನರನ್ನು ಗಮನಿಸಿ ಕಾಂಗ್ರೆಸ್‍ನವರು ದಿಗ್ಭ್ರಾಂತರಾಗಿದ್ದಾರೆ. ಜನ ಇವತ್ತು ಮೋದಿಜಿ, ಬಿಜೆಪಿ ಪರ ಇದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
ಈಗಾಗಲೇ ಅಮಿತ್ ಶಾ ಜಿ ಅವರೊಂದಿಗೆ ಮಾತನಾಡಿದ್ದೇನೆ. ನಮ್ಮೆಲ್ಲ ಸಂಸದರು, ರಾಜ್ಯಸಭಾ ಸದಸ್ಯರು ಚುನಾವಣೆ ಮುಗಿಯುವವರೆಗೆ ಸ್ವಕ್ಷೇತ್ರದಲ್ಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುವಂತೆ ತಿಳಿಸಿದ್ದಾರೆ. ಅದರಂತೆ ಕೆಲಸ ಪ್ರಾರಂಭ ಮಾಡಿದ್ದಾರೆ ಎಂದು ವಿವರಿಸಿದ್ದಾರೆ.
Advertisement
ರಾಜ್ಯ, ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ನಮ್ಮ ಮುಖ್ಯಮಂತ್ರಿಗಳು ಮೀಸಲಾತಿ (Reservation) ಮೂಲಕ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ. ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6, ಎಸ್ಸಿ ಎಡಕ್ಕೆ ಶೇ.6, ಎಸ್ಸಿ ಬಲಕ್ಕೆ ಶೇ.5.5, ಬೋವಿ, ಬಂಜಾರ ಸಮಾಜದವರಿಗೆ ಶೇ.4.5, ಇತರರಿಗೆ ಶೇ.1 ರಷ್ಟು, ಹೀಗೆ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ. ಮೀಸಲಾತಿ ವಿಚಾರದಲ್ಲಿ ಮುಸ್ಲಿಂ ಬಾಂಧವರಿಗೆ ಅನ್ಯಾಯ ಮಾಡಿಲ್ಲ. ಸಂವಿಧಾನ ಬಾಹಿರವಾಗಿ ಸೇರಿಸಿದ್ದ ಕಾರಣ ಇಲ್ಲಿ ರದ್ದು ಮಾಡಿ, ಅವರನ್ನು EWS (ಆರ್ಥಿಕ ದುರ್ಬಲ ವರ್ಗ) ಅಡಿ ಸೇರಿಸಿದ್ದೇವೆ. ತಪ್ಪು ಗ್ರಹಿಕೆ ಬೇಡ ಎಂದು ಶ್ಲಾಘಿಸಿದರು. ಇದನ್ನೂ ಓದಿ: ವಾರೆ ವಾಹ್.. ಅತಿ ಬುದ್ವಂತ್ರು ವ್ಯಾಪಾರೀ ರಾಜಕೀಯದ ಬಗ್ಗೆ ಕಾಮೆಂಟ್ ಮಾಡಿ ನೋಡೋಣ – ನೆಟ್ಟಿಗರಿಗೆ ಉಪೇಂದ್ರ ಖಡಕ್ ಪ್ರಶ್ನೆ
ಜನಬೆಂಬಲ ಪುನರಾವರ್ತನೆ:
ಹಿಂದಿನ ಲೋಕಸಭೆ ಚುನಾವಣೆಯಲ್ಲಿ 25 ಸೀಟು ಗೆಲ್ಲುವುದಾಗಿ ಹೇಳಿದ್ದೆ, ಅದು ಸತ್ಯವಾಗಿದೆ. ಪಕ್ಷೇತರ ಸುಮಲತಾ (Sumalatha) ಅವರೂ ನಮ್ಮ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಒಬ್ಬರು ಕಾಂಗ್ರೆಸ್, ಒಬ್ಬರು ಜೆಡಿಎಸ್‍ನವರಿದ್ದಾರೆ (JDS). ಲೋಕಸಭಾ ಚುನಾವಣೆಯ ಜನಬೆಂಬಲ ಮತ್ತೆ ಪುನರಾವರ್ತನೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಸಿಎಂ ಆಗಿದ್ದಾಗ ಲಂಬಾಣಿ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮಗಳನ್ನು ಮಾಡಿ ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತನೆ ಮಾಡಿದ್ದೆ. ಭೂರಹಿತ ದಲಿತ ಸಮುದಾಯಕ್ಕೆ ಭೂಮಿ ವಿತರಣೆ ಮಾಡಿದ್ದೇನೆ. ಅಲ್ಲದೇ, ಭಾಗ್ಯಲಕ್ಷ್ಮಿ ಯೋಜನೆ ನನಗೆ ಅತ್ಯಂತ ತೃಪ್ತಿ ಕೊಟ್ಟಿದೆ. ಬೈಸಿಕಲ್ ಕೊಡುವ ಯೋಜನೆಯೂ ಖುಷಿ ಕೊಟ್ಟಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್‌ಗೆ 60-70 ಸ್ಥಾನ ಅಷ್ಟೇ ಸಿಗೋದು:
ಕಾಂಗ್ರೆಸ್ ಪಕ್ಷಕ್ಕೆ 60-70 ಸ್ಥಾನ ಅಷ್ಟೇ ಸಿಗೋದು. ರಾಹುಲ್ ಗಾಂಧಿ (Rahul Gandhi), ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಸರಿಸಮ ಆಗಲು ಸಾಧ್ಯವೇ? ಕಾಂಗ್ರೆಸ್ ಮುಖಂಡರು ತಮಗೇ ಬಹುಮತ, ಸಿಎಂ ಪಟ್ಟ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಅದು ತಿರುಕನ ಕನಸಷ್ಟೇ. ಕಾಂಗ್ರೆಸ್ 60-70 ಸೀಟಿಗಿಂತ ಹೆಚ್ಚು ಗೆಲ್ಲಲು ಅಸಾಧ್ಯ ಎಂದು ನುಡಿದರು.
ವಿಜಯ ಸಂಕಲ್ಪ ಯಾತ್ರೆ ಮೂಲಕ ಇಡೀ ರಾಜ್ಯದಲ್ಲಿ ಬಿಜೆಪಿ ಗಾಳಿ ಬೀಸುವಂತಾಗಿದೆ. ಸಭೆಗಳಲ್ಲಿ 15-20 ಸಾವಿರ ಜನರ ಸೇರಿದ್ದರು. ಜನರ ಒಲವು ಬಿಜೆಪಿ ಕಡೆ ಇರುವುದರ ಸ್ಪಷ್ಟತೆ ಗೋಚರಿಸಿದೆ. ಪ್ರಧಾನಿ ಮೋದಿ ಮತ್ತೆ 2-3 ಸುತ್ತು ರಾಜ್ಯಕ್ಕೆ ಬರಲಿದ್ದಾರೆ. ಶಿವಮೊಗ್ಗ ವಿಮಾನನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ 2 ಲಕ್ಷ ಜನರು ನಿಲ್ಲಲು ಜಾಗವಿಲ್ಲದೇ ವಾಪಸ್ ಹೋಗಿದ್ದಾರೆ. ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತದೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ. ಅಲ್ಲದೆ, ಮೋದಿ ಅವರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವ ಇದೆ. ಅದರ ಲಾಭ ಪಕ್ಷಕ್ಕೆ ಸಿಗಲಿದೆ. ಜೊತೆಗೆ ಹೈವೇ ರಸ್ತೆಗಳು, ರೈಲ್ವೆ ಅಭಿವೃದ್ಧಿ, ಆಸ್ಪತ್ರೆಯ ಸೌಕರ್ಯಗಳು- ಸಾಮಾನ್ಯರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಮಾಹಿತಿ ನೀಡಿದರು.
ಆಯುಷ್ಮಾನ್, ಉಜ್ವಲ, ಶೌಚಾಲಯ, ಜಲಜೀವನ್ ಯೋಜನೆ, ಬೊಮ್ಮಾಯಿ ಸರ್ಕಾರದ ವಿವಿಧ ಯೋಜನೆಗಳು ನಮ್ಮ ಗೆಲುವಿಗೆ ಕಾರಣ ಆಗಲಿದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಕೇಂದ್ರ- ರಾಜ್ಯದ ಸಾಧನೆಯನ್ನು ತಿಳಿಸುತ್ತೇವೆ. ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತ ಖೂಬಾ, ರಾಷ್ಟ್ರೀಯ ವಕ್ತಾರ ಸೈಯದ್ ಜಾಫರ್ ಇಸ್ಲಾಂ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಮುಖ್ಯ ವಕ್ತಾರ ಎಂ.ಜಿ ಮಹೇಶ್, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.