ಕೋಲಾರ: ಹಾಡಹಗಲೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಬರ್ಬರವಾಗಿ ರಸ್ತೆ ಮಧ್ಯೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ (Kolara) ನಡೆದಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಘಟನೆ ಇಂದು (ಶನಿವಾರ) ನಾಲ್ಕು ಗಂಟೆ ಸುಮಾರಿಗೆ ನಡೆದಿದ್ದು, 40 ವರ್ಷದ ಅನಿಲ್ ಕೊಲೆಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯ. ಇದನ್ನೂ ಓದಿ: ಛತ್ತೀಸ್‍ಗಢ ಚುನಾವಣಾ ಕಾರ್ಯದಲ್ಲಿ ಸಕ್ರಿಯನಾಗಿದ್ದ ಬಿಜೆಪಿ ಮುಖಂಡನ ಹತ್ಯೆ
ಮಿಣಸಂದ್ರ ಗ್ರಾಮದವರಾದ ಹಾಲಿ ಜಯಮಂಗಲ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಮೃತ ಅನಿಲ್ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರಾಗಿದ್ದರು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೆ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಸಾಧ್ಯತೆ ಇದ್ದು, ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.
ಮೀಣಸಂದ್ರ ಗ್ರಾಮದ ಅನಿಲ್ ಕುಮಾರ್ ದ್ವಿಚಕ್ರ ವಾಹನದಲ್ಲಿ ಲಕ್ಕೂರು ಗೇಟ್‌ಗೆ ಬರುತ್ತಿದ್ದಾಗ ಮದ್ಯ ದಾರಿಯಲ್ಲಿ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಆಯುಧದಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬೆಲೆ ಬೀಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ – ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]