ನವದೆಹಲಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಎಸ್‍ಪಿ ಮೈತ್ರಿಕೂಟ ಹೀನಾಯವಾಗಿ ಸೋತರೂ ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರುವುದು ನಿಚ್ಚಳವಾಗಿದೆ.
ಆಡಳಿತರೂಢ ಶಿರೋಮಣಿ ಅಕಾಲಿದಳ ಬಿಜೆಪಿ ಮೈತ್ರಿಕೂಟವನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುತ್ತ ಹೆಜ್ಜೆ ಇರಿಸಿದೆ. 117 ಕ್ಷೇತ್ರಗಳ ಪೈಕಿ 67 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಶಿರೋಮಣಿ ಅಕಾಲಿ ದಳ 25, ಆಪ್ 22, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಬಹುಮತಕ್ಕೆ 59 ಸ್ಥಾನಗಳು ಅಗತ್ಯವಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ಪಕ್ಕಾ ಆಗಿದೆ.
2012ರಲ್ಲಿ ಶಿರೋಮಣಿ ಅಕಾಲಿದಳ 56,ಕಾಂಗ್ರೆಸ್ 46, ಬಿಜೆಪಿ 12, ಇತರರು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.