ನವದೆಹಲಿ: ಕೇಂದ್ರ ಬಿಜೆಟ್‍ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಟ್ವೀಟ್ ಮಾಡುವ ಮೂಲಕ ಬಜೆಟ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ದೇಶದಲ್ಲಿ ದುಡಿಯುವ ಮತ್ತು ಮದ್ಯಮ ವರ್ಗ ನಿರೀಕ್ಷೆ ಇಟ್ಟಿತ್ತು.ಕೋವಿಡ್ ನಿಂದ ನರಳಿದ ದುಡಿಯುವ ವರ್ಗ ಪರಿಹಾರ ಸಿಗುತ್ತದೆ ಎಂದು ನಿರೀಕ್ಷೆ ಮಾಡಿತ್ತು. ನೇರ ತೆರಿಗೆಯನ್ನು ಮುಂದುವರೆಸಿದೆ. ಕೋವಿಡ್ ಸಂದರ್ಭದಲ್ಲೂ ಯಥಾಸ್ಥಿತಿ ಮುಂದುವರಿಸಿದೆ. ದುಡಿಯುವ ವರ್ಗದ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ. ಹಣಕಾಸು ಸಚಿವರು ಮತ್ತು ಪ್ರಧಾನ ಮಂತ್ರಿ ಹುಸಿ ಮಾಡಿದ್ದಾರೆ ಎಂದು ಟ್ವೀಟ್ ಮಾಡಿ ಆಡಳಿತ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: Budget: 2022-23ರ ಹೊತ್ತಿಗೆ 5G ಮೊಬೈಲ್ ಸೇವೆ
Advertisement
India’s Salaried Class & Middle Class were hoping for relief in times of pandemic, all round pay cuts and back breaking inflation.
FM & PM have again deeply disappointed them in Direct Tax measures.
This is a betrayal of India’s Salaries Class & Middle Class.#Budget2022
— Randeep Singh Surjewala (@rssurjewala) February 1, 2022
Advertisement
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. 400 ಹೊಸ ತಲೆಮಾರಿನ ವಂಧೆ ಭಾರತ್ ರೈಲು, 2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೆರಿಸುವ ಯೋಜನೆ, ಗ್ರಾಮೀಣ ಮಕ್ಕಳಿಗೆ ವನ್ ಕ್ಲಾಸ್ ವನ್ ಟಿವಿ, ಕೆನ್ ಬೆಟ್ಟಾ ನದಿ ಜೋಡಣೆ ಯೋಜನೆ, ಪಿಎಂ ಆವಾಸ್ ಯೋಜನೆಯಡಿ 80 ಲಕ್ಷ ಮನೆ ನಿರ್ಮಾಣ, ಜಿಎಸ್‍ಟಿ ಸಂಗ್ರಹ, 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹೀಗೆ ಹಲವು ಯೋಜನೆಗಳನ್ನು ಕೇಂದ್ರ ಬಜೆಟ್ ಒಳಗೊಂಡಿತ್ತು.