ಬೆಂಗಳೂರು: ಚುನಾವಣೆ ಹತ್ತಿರವಾಗ್ತಿದೆ. ರಾಜಕೀಯ ಪಕ್ಷಗಳು ತಮ್ಮದೇ ರಣತಂತ್ರ ರೂಪಿಸ್ತಿದೆ. ಕಾಂಗ್ರೆಸ್‍ನಲ್ಲಿ (Congress) ಟಿಕೆಟ್ ಆಕಾಂಕ್ಷಿಗಳು ಹೆಚ್ಚಿರೋದು ಬಿಜೆಪಿ (BJP) ಕಣ್ಣು ಕೆಂಪಗಾಗಿಸಿದೆ.
Advertisement
ಒಂದೊಂದು ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಬಯಸಿ ಕನಿಷ್ಠ 3 ರಿಂದ 10 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಇರುವ ಪ್ರಭಾವಿ ನಾಯಕರಿಗೆ ಗಾಳ ಹಾಕಲು ಬಿಜೆಪಿ ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ. ಆದ್ರೇ, ಮೇಲ್ನೋಟಕ್ಕೆ ಮಾತ್ರ, ಕಾಂಗ್ರೆಸ್‍ನಲ್ಲಿ ಆಕಾಂಕ್ಷಿಗಳು ಹೆಚ್ಚಿರೋದನ್ನು ಸರಣಿ ಟ್ವೀಟ್ ಮೂಲಕ ವ್ಯಂಗ್ಯ ಮಾಡ್ತಿದೆ. ತೋಟ, ಹೊಲ ಗದ್ದೆಗಳಲ್ಲಿ ಒಮ್ಮೊಮ್ಮೆ ಬೆಳೆಗಿಂತ ಕಳೆ ಹೆಚ್ಚಾಗುತ್ತದೆ, ಹಾಗಂತ ಕಳೆ ಬೆಳೆಸಲು ಸಾಧ್ಯವೇ? ಟಿಕೆಟ್‍ಗೆ ಅರ್ಜಿ ಸಲ್ಲಿಸಿದ ಕ್ಷಣ ಅಧಿಕಾರಕ್ಕೆ ಬಂದೇ ಬಿಟ್ಟೆವು ಎನ್ನುವ ಭ್ರಮೆಯಿಂದ ಕಾಂಗ್ರೆಸ್ ಹೊರಬರಬೇಕು. ಯಾಕಂದ್ರೆ ಕಾಂಗ್ರೆಸ್ ಎಂಬ ಕಳೆಯನ್ನು ರಾಜ್ಯದ ಜನತೆ ನಾಶ ಮಾಡಲಿದ್ದಾರೆ ಎಂದು ಟೀಕಿಸಿದೆ. ಇದನ್ನೂ ಓದಿ: ಭಾರತವು 2047ರ ವೇಳೆಗೆ 40 ಟ್ರಿಲಿಯನ್ ಡಾಲರ್ ಆರ್ಥಿಕತೆ ದೇಶವಾಗುತ್ತೆ – ಮುಕೇಶ್ ಅಂಬಾನಿ
Advertisement
Advertisement
ಸಿದ್ದರಾಮಯ್ಯ (Siddaramaiah) ಅರ್ಜಿಯಲ್ಲಿ ಕ್ಷೇತ್ರ ನಮೂದಿಸದ ವಿಚಾರವನ್ನು ಬಿಜೆಪಿ ಅಸ್ತ್ರ ಮಾಡಿಕೊಂಡಿದೆ. ಸಿದ್ದರಾಮಯ್ಯ ಗೆಲ್ಲೋಕೆ ನಮ್ ರಾಜ್ಯದಲ್ಲಿ ಕ್ಷೇತ್ರವೇ ಇಲ್ಲ ಎಂದು ಸಚಿವ ಆರ್.ಅಶೋಕ್ (R.Ashok) ಲೇವಡಿ ಮಾಡಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಶಿಗ್ಗಾಂವಿಯಲ್ಲೇ ನಿಲ್ತಾರೆ. ಗೆಲ್ತಾರೆ ಎಂದು ಅಶೋಕ್ ಘೋಷಿಸಿದ್ದಾರೆ. ಇದನ್ನೂ ಓದಿ: ವೋಟರ್ ಲಿಸ್ಟ್ ಹಗರಣ – ಮುಖ್ಯ ಆರೋಪಿ ರವಿಕುಮಾರ್ ಆಪ್ತ ಲೋಕೇಶ್ ಬಂಧನ