ನವದೆಹಲಿ: ಲಾಕ್‍ಡೌನ್‍ನಿಂದ ನಗರಗಳಿಗೆ ಕೆಲಸ ಅರಸಿ ವಲಸೆ ಬಂದಿದ್ದ ಕಾರ್ಮಿಕರು ತಮ್ಮೂರಿಗೆ ವಾಪಸ್ ಹೋಗಲು ಕಷ್ಟಪಡುತ್ತಿದ್ದಾರೆ. ಹೀಗಾಗಿ ದೇಶದ ವಿವಿಧ ರಾಜ್ಯಗಳಿಂದ ತಮ್ಮ ಊರುಗಳಿಗೆ ಹೋಗುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದು ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
Statement Of Congress President Smt. Sonia Gandhi
The Indian National Congress has
taken a decision that every Pradesh
Congress Committee shall bear the cost for the rail travel of every needy worker and migrant labourer and shall take necessary steps in this regard pic.twitter.com/kxruKa0xgI
— Congress (@INCIndia) May 4, 2020
Advertisement
ಈ ಬಗ್ಗೆ ಸೋನಿಯಾ ಗಾಂಧಿ ಅವರು ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆದೇಶ ಹೊರಡಿಸಿದ್ದಾರೆ. ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ವಾಪಸ್ ಹೋಗಲು ರೈಲ್ವೆ ಪ್ರಯಾಣದ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಉಚಿತ ಬಸ್ ಸಂಚಾರಕ್ಕಾಗಿ 1 ಕೋಟಿ ದೇಣಿಗೆ ಕೊಟ್ಟ ಕೆಪಿಸಿಸಿ
Advertisement
What is the responsibility of our Govt? Even today lakhs of workers & migrant labourers are languishing in different parts of the country. What is disturbing is that Govt is charging them for train tickets in this crisis: Congress President Smt. Sonia Gandhi#CongressForIndia pic.twitter.com/b6YMx6UB3n
— Congress (@INCIndia) May 4, 2020
Advertisement
ದೇಶದ ಬಡವರು ಕಷ್ಟದಲ್ಲಿರುವಾಗ ಅವರಿಗೆ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಕೊಡುಗೆಯಿದು. ಈ ಸಮಯದಲ್ಲಿ ಕಾರ್ಮಿಕರ ನೆರವಿಗೆ ನಿಲ್ಲಬೇಕಾಗಿದೆ. ವಿದೇಶಗಳಲ್ಲಿ ಸಿಲುಕಿ ಹಾಕಿಕೊಂಡಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರಲು ಸರ್ಕಾರ ಆಸಕ್ತಿ ತೋರುತ್ತದೆ. ಆದರೆ ನಮ್ಮ ದೇಶದಲ್ಲಿರುವ ಬಡ, ನಿರ್ಗತಿಕ ವಲಸೆ ಕಾರ್ಮಿಕರ ಬಗ್ಗೆ ಯಾಕೆ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.
Advertisement
There needs to be provisions for safe & free rail travel of migrant
workers & labourers to their home-towns. Despite our repeated demands, Central Government & the Rail Ministry have chosen to completely ignore the same: Congress President Smt. Sonia Gandhi#CongressForIndia pic.twitter.com/cZUPplawLY
— Congress (@INCIndia) May 4, 2020
ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ರೈಲಿನಲ್ಲಿ ಉಚಿತವಾಗಿ ಅವರ ಊರುಗಳಿಗೆ ಕಳುಹಿಸಿ ಎಂದು ಕಾಂಗ್ರೆಸ್ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮತ್ತು ರೈಲ್ವೆ ಸಚಿವಾಲಯಗಳಿಗೆ ಮನವಿ ಮಾಡಿದೆ. ಆದರೂ ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.
This will be the Indian National Congress’ humble contribution in service of our compatriots and to stand shoulder to shoulder in solidarity with them: Congress President Smt. Sonia Gandhi#CongressForIndia pic.twitter.com/3d3pKiu3iT
— Congress (@INCIndia) May 4, 2020