Tuesday, 16th July 2019

ಗೋಕಾಕ್ ಸಾಹುಕಾರನ ಮನವೊಲಿಕೆಗೆ ಕಾಂಗ್ರೆಸ್ ಕೊನೆ ಪ್ರಯತ್ನ!

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ಮುನಿಸಿಕೊಂಡು ಪಕ್ಷದ ಶಾಸಕಾಂಗ ಸಭೆಗೂ ಹಾಜರಾಗದೆ ಮುಂಬೈ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮನವೊಲಿಕೆಗೆ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಅಂತಿಮ ಪ್ರಯತ್ನ ಎಂಬಂತೆ ಸಂಧಾನ ಸಂದೇಶ ರವಾನೆ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಅವರ ಮೂಲಕ ರಮೇಶ್ ಜಾರಕಿಹೊಳಿ ಅವರ ಮನವೊಲಿಕೆ ಮಾಡಲು ಸಿದ್ದರಾಮಯ್ಯ ಅವರು ಸಂದೇಶ ನೀಡಿದ್ದಾರೆ ಎನ್ನಲಾಗಿದ್ದು, ರಮೇಶ್ ಜಾರಕಿಹೊಳಿ ಮಾತ್ರವಲ್ಲದೇ ಇತರೇ ಶಾಸಕರಿಗೂ ಕೊನೆಯ ಅವಕಾಶ ನೀಡಿ, ಹಠ ಬಿಟ್ಟು ಬನ್ನಿ ಎಂದು ತಿಳಿ ಹೇಳಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದರ ಬೆನ್ನಲ್ಲೇ ಮಾಜಿ ಅರಣ್ಯ ಸಚಿವ ಆರ್.ಶಂಕರ್ ಅವರು ಮುಂಬೈ ಹೋಟೆಲ್ ನಿಂದ ಹೊರ ಬಂದು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ದೋಸ್ತಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದ ಶಂಕರ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ ಎನ್ನಲಾಗಿದೆ. ಪರಿಣಾಮವಾಗಿ ಶಂಕರ್ ಅವರು ಬೆಂಗಳೂರಿಗೆ ವಾಪಸ್ ಮರಳುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಶಂಕರ್ ಅವರ ಬೆಂಬಲ ಪಡೆಯುವ ಮೂಲಕ ಸರ್ಕಾರ ಸುಭದ್ರಗೊಳಿಸಲು ದೊಸ್ತಿ ಪಕ್ಷ ಹೆಜ್ಜೆ ಇಟ್ಟಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *