ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಇಡಿ ನಡೆಸುತ್ತಿರುವ ವಿಚಾರಣೆಗೆ ಇದೀಗ ಕಾಂಗ್ರೆಸ್ ಅಗ್ನಿಪಥ್ ಬ್ರಹ್ಮಾಸ್ತ್ರ ಪ್ರಯೋಗಿಸಿದೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಕಾಂಗ್ರೆಸ್ ಶಾಂತಿಯುತ ಪ್ರತಿಭಟನೆಗೆ ಸಜ್ಜಾಗಿದೆ.
Advertisement
ಹೈಕಮಾಂಡ್ ಸೂಚನೆ ಮೇರೆಗೆ ಜೂನ್ 27ರಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಎಲ್ಲ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: 5 ಸ್ಟಾರ್ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಫುಲ್ ಬಿಂದಾಸ್ – ದಿನದ ಖರ್ಚು ಎಷ್ಟು ಗೊತ್ತಾ?
Advertisement
Advertisement
ಜೂನ್ 27ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಾಂತಿಯುತ ಸತ್ಯಾಗ್ರಹ ನಡೆಸಲು ಸೂಚಿಸಲಾಗಿದೆ. ಯುವಕ-ಯುವತಿಯರು, ವಿದ್ಯಾರ್ಥಿಗಳು ಭಾಗವಹಿಸುವಂತೆ ಕರೆ ನೀಡಲಾಗಿದೆ. ಅಲ್ಲದೇ ಆಯಾ ಕ್ಷೇತ್ರದ ಶಾಸಕರು, 2018ರ ಚುನಾವಣಾ ಅಭ್ಯರ್ಥಿಗಳು ಈ ಸತ್ಯಾಗ್ರಹದ ನೇತೃತ್ವ ವಹಿಸಲು ತಿಳಿಸಲಾಗಿದೆ. ಇದನ್ನೂ ಓದಿ: 55 ಶಾಸಕರು ನಮ್ಮ ಬಳಿ ಇದ್ದಾರೆ – ಉದ್ಧವ್ ಬೆದರಿಕೆಗೆ ಜಗ್ಗದ ರೆಬೆಲ್ಸ್