ತಿರುವನಂತಪುರಂ: ಲೋಕಸಭೆಯಿಂದ ರಾಹುಲ್ ಗಾಂಧಿ (Rahul Gandhi) ಅವರನ್ನು ಅನರ್ಹಗೊಳಿಸಿದ ವಿರುದ್ಧದ ಪ್ರತಿಭಟನೆಯ ಭಾಗವಾಗಿ ವಯನಾಡಿನಲ್ಲಿ ಶನಿವಾರ ಪಕ್ಷವು ಬ್ಲ್ಯಾಕ್ ಡೇ ಆಚರಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಎನ್.ಡಿ ಅಪ್ಪಚ್ಚನ್ ಹೇಳಿದರು.
ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಸಂಸದರಾಗಿದ್ದರು. ಈ ಬಗ್ಗೆ ಕೇರಳದ (Kerala) ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಮಾತನಾಡಿ, ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಮವನ್ನು ರಾಜಕೀಯ ಪ್ರೇರಿತ ತರಾತುರಿಯಾಗಿದೆ. ಲೋಕಸಭೆಯ ಸೆಕ್ರೆಟರಿಯೇಟ್ ಕ್ರಮವನ್ನು ಕಾಂಗ್ರೆಸ್ ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ಎದುರಿಸಲಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ಸಂವಿಧಾನಬಾಹಿರ: ಶರದ್ ಪವಾರ್
Advertisement
Advertisement
ಸೂರತ್ ನ್ಯಾಯಾಲಯದ ತೀರ್ಪು ಅಂತಿಮವಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವ ಮತ್ತು ಕಾನೂನು ಸುವ್ಯವಸ್ಥೆಯಲ್ಲಿ ನಂಬಿಕೆ ಹೊಂದಿದೆ. ದೇಶದಲ್ಲಿ ಸುಪ್ರೀಂ ಕೋರ್ಟ್‍ನವರೆಗೆ ವಿಸ್ತರಿಸುವ ಕಾನೂನು ವ್ಯವಸ್ಥೆ ಇದೆ. ರಾಹುಲ್ ಗಾಂಧಿ ಕಾನೂನು ಮಾರ್ಗದಲ್ಲಿ ಸಂಸದ ಸ್ಥಾನಕ್ಕೆ ಹಿಂತಿರುಗುತ್ತಾರೆ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಿಗಾಗಿ ನಾವು ಧ್ವನಿ ಎತ್ತುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?