DistrictsKarnatakaLatestMain Post

ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು ಅಕ್ಷಮ್ಯ : ಲಿಂಬಾವಳಿ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ರೀತಿ ಅಕ್ಷಮ್ಯ ಎಂದು ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.

ಮಹಿಳೆಯ ಮೇಲೆ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ದರ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಶಾಸಕ ಲಿಂಬಾವಳಿಯ ವರ್ತನೆ ಬಿಜೆಪಿಯ ಜನವಿರೋಧಿ ಧೋರಣೆ. ಇದು ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತೆ ಮರೆಯಾಗುವುದಿಲ್ಲ.
ಬೊಮ್ಮಾಯಿ ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಸ್ತ್ರೀ ಉದ್ಧಾರಕರಂತೆ ಕೇವಲ ಬೂಟಾಟಿಕೆಯ ಮಾತಾಡುವ ಬಿಜೆಪಿಗರೇ, ನಿಮ್ಮ ಪಕ್ಷದ ಅರವಿಂದ ಲಿಂಬಾವಳಿಯವರು ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ರೀತಿ ಅಕ್ಷಮ್ಯ. ಇಂಥ ಮಹಿಳಾ ವಿರೋಧಿ ನಡೆಯ ವಿರುದ್ಧ ಮಾತಾಡುವ ಧೈರ್ಯ ತೋರುತ್ತೀರಾ? ಅರವಿಂದ ಲಿಂಬಾವಳಿಯವರು ಆ ಹೆಣ್ಣಿನ ಕ್ಷಮೆ ಕೇಳುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮನವಿ ಸಲ್ಲಿಸಲು ಬಂದ ಮಹಿಳೆಗೆ ಗದರಿದ ಅರವಿಂದ ಲಿಂಬಾವಳಿ

ಮನವಿ ಸಲ್ಲಿಸಲು ಬಂದ ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ ಗದರಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಮಳೆ ಅನಾಹುತ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಿಸಲು ಅಧಿಕಾರಿಗಳ ಜೊತೆ ಅರವಿಂದ ಲಿಂಬಾವಳಿ ಬಂದಿದ್ದರು. ಈ ವೇಳೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಏರು ದನಿಯಲ್ಲಿ ಅವಾಜ್ ಹಾಕಿದ್ದಾರೆ. ನಂತರ ಮಹಿಳೆಯನ್ನು ಸ್ಟೇಷನ್‍ಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಕಿಡಿಕಾರಿದ್ದರು.

Live Tv

Leave a Reply

Your email address will not be published.

Back to top button