ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ

Public TV
3 Min Read
bjp 2

ಬೆಂಗಳೂರು: ವರುಣನ ಆರ್ಭಟಕ್ಕೆ ಬೆಂಗಳೂರಿನ ಸ್ಥಿತಿ ಅಧೋಗತಿ ತಲುಪಿದೆ. ಈ ನಡುವೆ `ಬೆಂಗಳೂರು ರಕ್ಷಿಸಬೇಕಾದ ಬೆಂಗಳೂರು ಸಚಿವರು ಕಾಣೆಯಾಗಿದ್ದಾರೆ’ ಎಂದು ಮಿಸ್ಸಿಂಗ್ ಮಿನಿಸ್ಟರ್ಸ್ ಹ್ಯಾಷ್‍ಟ್ಯಾಗ್‍ನಡಿ ಬಿಜೆಪಿ ಸಚಿವರು, ಸಂಸದರ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.

congress flag

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ಮಿಂಗ್ ಮಾಡುತ್ತಿದ್ದರು. ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ. ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ ಎಂದು ವ್ಯಂಗ್ಯವಾಡಿದ್ದಾರೆ.

ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ. ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಆರಗ ಜ್ಞಾನೇಂದ್ರ ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ ಆರ್. ಅಶೋಕ್ ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ. ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಾಬ್, ಹಲಾಲ್‍ಗಳಿಗೆ ಕ್ರಿಯಾಶೀಲರಾಗುತ್ತಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಹಾ ಮಳೆಗೆ ವ್ಯಂಗ್ಯ – #LeaveBengaluru ಅಭಿಯಾನ ಆರಂಭಿಸಿದ ಕನ್ನಡಿಗರು

ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ? ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ ‘ನಾನೇ ಸಿಎಂ’ ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ. “ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ” ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು ಡಾ. ಅಶ್ವಥ್‍ನಾರಾಯಣ್ ಅವರೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ. ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ. ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ ಎಂದು ಕಾಲೆಳೆದಿದ್ದಾರೆ.

ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ ಎಸ್.ಟಿ. ಸೋಮಶೇಖರ್ ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ. ಜನತೆ ಹುಡುಕುತ್ತಿದ್ದಾರೆ. ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ. ಸಚಿವರೇ ಜನರತ್ತ ನೋಡುವುದು ಯಾವಾಗ ಎಂದಿದ್ದಾರೆ.

ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ? ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ? ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸೋತಿದ್ದಕ್ಕೆ ಕ್ರೀಡಾಂಗಣದಲ್ಲಿ ಅಫ್ಘಾನ್‌ ಅಭಿಮಾನಿಗಳ ಹುಚ್ಚಾಟ – ಚಯರ್‌ನಲ್ಲೇ ಪಾಕಿಗಳ ಮೇಲೆ ಹಲ್ಲೆ

ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ ಗೋಪಾಲಯ್ಯ.ಕೆ ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ. ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಾಪತ್ತೆಯಾಗಿದ್ದೆಲ್ಲಿ? ಸಿಎಂ ಸಚಿವರೆಲ್ಲರನ್ನೂ ‘ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ’ ಎಂಬಂತೆ ಬಿಟ್ಟಿದ್ದಾರೆಯೇ ಎಂದು ಕಿಡಿಕಾರಿದ್ದಾರೆ.

ಒಂದೇ ಒಂದು ಬಾರಿ ಸಿಎಂ ಜೊತೆಯಲ್ಲಿ ನೆಪಮಾತ್ರದ ಸಿಟಿ ರೌಂಡ್ಸ್ ಹೊಡೆದಿದ್ದು ಬಿಟ್ಟರೆ ಬೆಂಗಳೂರಿನ ಸಚಿವರಾದ ಭೈರತಿ ಬಸರಾಜ ಅವರು ಮತ್ತೆ ಎಲ್ಲಿಯೂ ಕಾಣಿಸಿಕೊಳಲಿಲ್ಲ. ನೀರು ನುಗ್ಗಿದ ಮನೆಗಳಿಗೆ ಪರಿಹಾರವೇನು? ನೀರು ನಿಂತ ರಸ್ತೆಗಳಿಗೆ ಮುಕ್ತಿ ಏನು? ಸಚಿವರು ಜನರ ಕಷ್ಟ ಆಲಿಸಲು ಹೋಗದಿರುವುದೇಕೆ ಎಂದು ಹರಿಹಾಯ್ದಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *