ಕೋಲಾರ: ಕಾಂಗ್ರೆಸ್ (Congress) ಸರ್ಕಾರ ಎಸ್‌ಸಿಎಸ್‌ಪಿ (SCSP) ಮತ್ತು ಟಿಎಸ್‌ಪಿ (TSP) ಹಣವನ್ನು ಗ್ಯಾರಂಟಿಗೆ ಬಳಸಲು ಮುಂದಾಗಿರುವುದನ್ನು ಕೋಲಾರ ಜಿಲ್ಲೆಯ ಮುಖಂಡರು ಖಂಡಿಸಿದ್ದಾರೆ.
ಕೋಲಾರದ (Kolar) ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖಂಡರು, ಬಜೆಟ್‌ನಲ್ಲಿ 13,340 ಕೋಟಿ ರೂ. ಮೀಸಲಿಟ್ಟಿದ್ದು, ಯಾವುದೇ ಕಾರಣಕ್ಕೂ ಇದನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಬಾರದು. ಈ ಬಗ್ಗೆ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕರು ಧ್ವನಿ ಎತ್ತಬೇಕು. 2024-24ರ ಬಜೆಟ್‌ನಲ್ಲಿಟ್ಟದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರೆಂಟಿಗಳಿಗೆ ಬಳಕೆ ಮಾಡಲಾಗಿದೆ. ಈ ವರ್ಷ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿಗೆ ಬಳಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಬಜೆಟ್ ಮೇಲೆ ನಡೆಯುತ್ತಿರುವ ಚರ್ಚೆಯಲ್ಲಿ ಇದಕ್ಕೆ ಅವಕಾಶ ಕೊಡಬಾರದು. ಜನಸಂಖ್ಯೆ ಮೇಲೆ ಮತ್ತು ಆರ್ಥಿಕ ನೀತಿ ಸಮಿತಿಯ ಆಧಾರದ ಮೇಲೆ ಮೀಸಲಿಟ್ಟಿರುವ ಹಣ ಇದಾಗಿದ್ದು, ಅದೇ ಜನಾಂಗಕ್ಕೆ ವ್ಯಯ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಅನುದಾನ ಬಿಡುಗಡೆ – ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೆ ಬೊಮ್ಮಾಯಿ ಕೃತಜ್ಞತೆ
ಕಾಂಗ್ರೆಸ್ ಸರ್ಕಾರ ಬಂದಮೇಲೆ ಬಡವರ ಹಣವನ್ನು ಕಸಿಯುವ ಮೂಲಕ ವಂಚನೆ ಮಾಡುತ್ತಿದೆ. ಈಗಾಗಲೇ ಮಾ.6ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಲಾಗಿದೆ. ಮುಂದೆ ಸಹ ಇದೇ ರೀತಿ ಮುಂದುವರಿದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಎಸ್.ಮುನಿಸ್ವಾಮಿ, ಮಾಜಿ ಶಾಸಕ ಸಂಪಂಗಿ, ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ, ಮಹೇಶ್ ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಳಗಾವಿ| ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್