ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಶನಿವಾರ) ಪ್ರಮಾಣವಚನ ಸ್ವೀಕಾರ ಮಾಡಿದರು.
Advertisement
ಕಂಠೀರವ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 8 ಮಂದಿ ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು. ಇವರೆಲ್ಲರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನು ಡಿಕೆಶಿಯವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
Advertisement
Advertisement
ಕಾರ್ಯಕ್ರಮದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನಟ ಕಮಲ್ ಹಾಸನ್, ಶಿವರಾಜ್ ಕುಮಾರ್, ದುನಿಯಾ ವಿಜಯ್, ನಟಿ ರಮ್ಯಾ, ಉಮಾಶ್ರೀ, ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು. ಇದನ್ನೂ ಓದಿ: ಉದ್ಯಮಿ ಆಗುವ ಕನಸು ಕಂಡಿದ್ದ ಡಿಕೆಶಿ ಡಿಸಿಎಂ ಆಗಿದ್ದು ಹೇಗೆ..?
Advertisement
ಸಿದ್ದರಾಮಯ್ಯ ಅವರ ಸಂಪುಟ ದರ್ಜೆ ಸಚಿವರಾಗಿ ಪರಮೇಶ್ವರ್, ಪ್ರಿಯಾಂಕ ಖರ್ಗೆ, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.