ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕ ಬಾಳಾಸಾಹೇಬ್ ಥೋರಟ್ (Balasaheb Thorat) ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ (Nana Patole) ಅವರೊಂದಿಗಿನ ಅಸಮಾಧಾನ ಸ್ಫೋಟಗೊಂಡ ಒಂದು ದಿನದ ನಂತರ ಬೆಳವಣಿಗೆ ಕಂಡುಬಂದಿದೆ. ಇದನ್ನೂ ಓದಿ: ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್ಡಿಕೆ ಸ್ಪಷ್ಟನೆ
Advertisement
Advertisement
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ (Nana Patole) ಅವರಿಂದ ತನಗೆ ಅವಮಾನವಾಗಿದೆ ಎಂದು ದೂರಿರುವ ಥೋರಟ್, ಪಟೋಲೆ ಅವರೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಜೊತೆಗೆ ರಾಜೀನಾಮೆ ಪತ್ರವನ್ನೂ ಸಲ್ಲಿಸಿದ್ದಾರೆ. ಅವರು ತಮ್ಮ ನಿಲುವಿಗೆ ಬದ್ಧರಾಗಿದ್ದು, ರಾಜೀನಾಮೆ ಹಿಂಪಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.
Advertisement
ಥೋರಟ್ ಪಕ್ಷದಲ್ಲಿ ತಮಗೆ ಅವಮಾನವಾಗಿದ್ದು, ರಾಜೀನಾಮೆ ನೀಡುತ್ತಿರುವುದಾಗಿ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಪಾರ್ಟಿ ನೆಪದಲ್ಲಿ ಕರೆಸಿ, ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರ ಯತ್ನ
Advertisement
ಬಾಳಾಸಾಹೇಬ್ ಥೋರಟ್ ಅವರ ಸಂಬಂಧಿಯಾಗಿರುವ ನಾಸಿಕ್ ಪದವೀಧರ ಕ್ಷೇತ್ರದ ಎಂಎಲ್ಸಿ (MLC) ಸುಧೀರ್ ತಾಂಬೆ ಅವರು ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಯಾಗಿದ್ದರು. ಆದರೂ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ತಾಂಬೆ ಅವರು ತಮ್ಮ ಮಗ ಸತ್ಯಜಿತ್ ತಾಂಬೆಯನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದರು. ಸತ್ಯಜಿತ್ ಅವರು ಚುನಾವಣೆಯಲ್ಲಿ ಗೆದ್ದರು. ಫೆಬ್ರವರಿ 2 ರಂದು ಫಲಿತಾಂಶ ಪ್ರಕಟಿಸಲಾಯಿತು.
ಎಂಎಲ್ಸಿ ಚುನಾವಣೆಯಲ್ಲಿ ಪಕ್ಷ ವಿರೋಧ ಚಟುವಟಿಕೆ ನಡೆಸಿದ್ದಾರೆ ಎಂದು ಸುಧೀರ್ ತಾಂಬೆ ಹಾಗೂ ಸತ್ಯಜಿತ್ ತಾಂಬೆ ಅವರನ್ನು ಕಾಂಗ್ರೆಸ್ ಅಮಾನತುಗೊಳಿಸಿತ್ತು. ಹಾಗಾಗಿ ರಾಜ್ಯ ಕಾಂಗ್ರೆಸ್ ನಾಯಕತ್ವದಿಂದ ನನಗೆ ಅವಮಾನವಾಗಿದೆ. ತಾಂಬೆ ವಿಚಾರದಲ್ಲಿ ನನ್ನ ಕುಟುಂಬದ ವಿರುದ್ಧ ಹೇಳಿಕೆ ನೀಡಲಾಗುತ್ತಿದೆ ಎಂದು ಥೋರಟ್ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಪಟೋಲೆ ಅವರು ನಾನು ಬಿಜೆಪಿ ವಿರುದ್ಧ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಂಬಿಸಲು ಕೆಟ್ಟದ್ದಾಗಿ ಪ್ರಚಾರ ನಡೆಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ತನ್ನನ್ನು ಸಂಪರ್ಕಿಸಿಲ್ಲ ಎಂದು ಥೋರಟ್ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k