– ಬಿಜೆಪಿಯ ಸಿಹಿ ಸುಳ್ಳುಗಳನ್ನು ಜನರು ಬೇಗ ನಂಬುತ್ತಾರೆ
ಚಿತ್ರದುರ್ಗ: ಹರಿಯಾಣದಲ್ಲಿ (Haryana) ಕಾಂಗ್ರೆಸ್‌ಗೆ (Congress) ಅಧಿಕಾರದ ಭರವಸೆಯಿತ್ತು. ಮೂರನೇ ಬಾರಿಗೆ ಬಿಜೆಪಿಗೆ (BJP) ಅಧಿಕಾರ ಸಿಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ (Jammu And Kashmir) ಹಾಗೂ ಹರಿಯಾಣ ಚುನಾವಣಾ ಫಲಿತಾಂಶದ (Election Results) ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ ವಿರುದ್ಧ ಅಲ್ಲಿನ ಜನರಿದ್ದರು. ಕೇಂದ್ರ ಸರ್ಕಾರದ ವಿರುದ್ಧವೂ ಹರಿಯಾಣ ಜನರಿದ್ದರು. ಹರಿಯಾಣದಲ್ಲಿ ಗ್ಯಾರಂಟಿ ಘೋಷಣೆ ವಿಫಲ ಅಂತ ಅಲ್ಲ. ಬಿಜೆಪಿಯ ಸಿಹಿ ಸುಳ್ಳುಗಳನ್ನು ಜನರು ಬಹುಬೇಗ ನಂಬುತ್ತಾರೆ. ಜನ ನಂಬುವಂತೆ ಬಿಜೆಪಿಗರು ಸುಳ್ಳುಗಳನ್ನು ಹೇಳುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಇಲ್ಲೂ ನಂಬಿದ್ದರು ಎಂದರು. ಇದನ್ನೂ ಓದಿ: ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ನಡೆದಿಲ್ಲ: ಸಚಿವ ಕೃಷ್ಣಭೈರೇಗೌಡ
ಐದು ವರ್ಷ ಸಿದ್ಧರಾಮಯ್ಯ ಸಿಎಂ ಆಗಿ ಇರುತ್ತಾರೆ. ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರಗೆ ಕನಸು ಬೀಳುತ್ತಿರುತ್ತವೆ ಎಂದು ವ್ಯಂಗ್ಯವಾಡಿದರು. ಜಾತಿ ಜನಗಣತಿ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು. ನ್ಯೂನತೆಗಳಿದ್ದರೆ ಸರಿಪಡಿಸಿ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ದಲಿತ ಸಿಎಂ ವಿಚಾರ ಈಗ ಅಪ್ರಸ್ತುತ. ಮುಂದೆ ದಲಿತರು ಸಿಎಂ, ಪಿಎಂ ಆಗಲಿ, ಬೇಡ ಎನ್ನಲು ಆಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ