ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಏಜೆಂಟ್ ಎಂದು ಕಾಂಗ್ರೆಸ್‍ನ ಪಶ್ಚಿಮ ಮುಖ್ಯಸ್ಥ ಅಧೀರ್ ರಂಜನ್ ಚೌದರಿ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಚ್ಚುತನದ ವ್ಯಕ್ತಿಗೆ ನಾನು ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಪ್ರತಿಪಕ್ಷಗಳ ಒಟ್ಟು ಮತಗಳ ಶೇಕಡಾ 20ರಷ್ಟು ಮತವನ್ನು ಕಾಂಗ್ರೆಸ್ ಹೊಂದಿದೆ. ಭಾರತದಾದ್ಯಂತ ಕಾಂಗ್ರೆಸ್ 700 ಶಾಸಕರನ್ನು ಹೊಂದಿದೆ. ಜೊತೆಗೆ ಪ್ರತಿಪಕ್ಷಗಳ ಒಟ್ಟು ಮತಗಳ ಶೇಕಡಾ 20ರಷ್ಟು ಕಾಂಗ್ರೆಸ್ ಹೊಂದಿದೆ. ಅದು ಅವರ ಬಳಿ ಇದೆಯೇ ಎಂದು ತಿರುಗೇಟು ನೀಡಿದರು.
ಮಮತಾ ಬ್ಯಾನರ್ಜಿ ಅವರು ಬಿಜೆಪಿಯನ್ನು ಮೆಚ್ಚಿಸಲು ಮತ್ತು ಅದರ ಏಜೆಂಟ್ ಆಗಿ ಕಾರ್ಯನಿರ್ವಹಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಜೊತೆ ಸುದ್ದಿಯಲ್ಲಿ ಇರಲು ಈ ರೀತಿಯ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 122 ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಭಗವಂತ್ ಮಾನ್
ಮಮತಾ ಬ್ಯಾನರ್ಜಿ ಅವರು ಬಿಜೆಪಿಯನ್ನು ಮೆಚ್ಚಿಸಲು ಗೋವಾಕ್ಕೆ ಹೋದರು. ಆದರೆ ಗೋವಾದಲ್ಲಿ ಕಾಂಗ್ರೆಸ್ ಅನ್ನು ದುರ್ಬಲಗೊಳಿಸಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಶಾಲೆಗೆ ಮದ್ಯ ಸೇವಿಸಿ ಬಂದ ಶಿಕ್ಷಕ – ವಿದ್ಯಾರ್ಥಿ ಮೇಲೆ ಬ್ಯಾಟ್‍ನಿಂದ ಹಲ್ಲೆ
ಈ ಹಿಂದೆ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಹಾಗೂ ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಮಾತನಾಡಿದ್ದ ಮಮತಾ ಬ್ಯಾನರ್ಜಿ ಅವರು, ಬಿಜೆಪಿ ವಿರುದ್ಧ ಹೋರಾಡಲು ಬಯಸುವ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ನಡೆಯಬೇಕು. ಕಾಂಗ್ರೆಸ್ ತಮ್ಮ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್ ಮೇಲೆ ಅವಲಂಬಿತವಾಗಿಲ್ಲ ಎಂದು ಹೇಳಿದ್ದರು.