ಹುಬ್ಬಳ್ಳಿ: ದೇಶದಲ್ಲಿ ಇಬ್ಬರು ಸಿದ್ದು ಇದ್ದಾರೆ. ಒಬ್ಬ ಸಿದ್ದು ಪಂಜಾಬ್‌ನಲ್ಲಿ ಕಾಂಗ್ರೆಸ್ ನಾಶ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಸಿದ್ದು ಅಂದರೆ ಸಿದ್ದರಾಮಯ್ಯ ಕಾಂಗ್ರೆಸ್ ಸರ್ವನಾಶ ಮಾಡುತ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಸಿದ್ದರಾಮಯ್ಯ ಮತ್ತು ಡಿಕೆಶಿ ಬಣ ಬೇರೇ ಬೇರೆ ಇದೆ. ಈಗಾಗಲೇ ಅವರಲ್ಲಿ ಗುಂಪುಗಾರಿಕೆ ಆರಂಭವಾಗಿದೆ. ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದರು. ಈಗ ಅದೇ ಮಾತಿನಂತೆ ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತಿದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಅಷ್ಟು ದೂರದಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದರೂ ಸರ್ಕಾರ ಏನೂ ಮಾಡಿಲ್ಲ ಅಂತಿದ್ದಾರೆ: ಸೂರ್ಯ ಅಸಮಾಧಾನ
Advertisement
Advertisement
ರಾಜ್ಯದಲ್ಲಿ ಹಿಂದಿನ ಎಲ್ಲಾ ಸರ್ಕಾರಗಳು ಬಜೆಟ್ ಹಣವನ್ನು ಬಾಕಿ ಉಳಿಸಿಕೊಂಡಿವೆ. ಸಿದ್ದರಾಮಯ್ಯ ಅವರ ಇಂದಿರಾ ಕ್ಯಾಂಟೀನ್ ಹಣ ಸಾಕಷ್ಟು ಬಾಕಿ ಉಳಿದಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲಿ ಎಂದರು.
Advertisement
ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿಲ್ಲ. ಗೋವಾ ಚುನಾವಣೆ ಪ್ರಣಾಳಿಕೆಯಲ್ಲಿ ಕರ್ನಾಟಕಕ್ಕೆ ನೀರು ಕೊಡುವುದಿಲ್ಲ ಎಂದು ಹೇಳುತ್ತಾರೆ. ಆದರೆ ರಾಜ್ಯದಲ್ಲಿ ಮಹದಾಯಿ ನೀರಿಗಾಗಿ ಪಾದಯಾತ್ರೆ ಮಾಡುತ್ತೇವೆ ಎನ್ನುತ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಜಗದೀಶ್ ಶೆಟ್ಟರ್ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಕಂದಾಯ ದಾಖಲೆ ಮನೆ ಬಾಗಿಲಿಗೆ- ಯೋಜನೆಗೆ ಸಿಎಂ ಚಾಲನೆ
Advertisement
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಶೆಟ್ಟರ್ ನನ್ನ ನಿಲುವು ಸ್ಪಷ್ಟವಿದೆ. ನಾನು ಸಂಪುಟ ಸೇರುವುದಿಲ್ಲ. ನನ್ನ ರಾಜಕೀಯ ಅನುಭವದ ಪ್ರಕಾರ ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆಯಲ್ಲ ಎಂದರು.