ಹೈದರಾಬಾದ್: ಗುಜರಾತಿನಲ್ಲಿ (Gujrat) ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಗುತ್ತಿಗೆ ನೌಕರರಿಗೆ ಸ್ಥಿರ ಉದ್ಯೋಗಗಳನ್ನು ನೀಡಲಿದೆ, ಜೊತೆಗೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮತ್ತೆ ಜಾರಿಗೆ ತರಲಿದೆ ಮತ್ತು ಸಕಾಲಕ್ಕೆ ಬಡ್ತಿ ಸಿಗುವಂತೆ ನೋಡಿಕೊಳ್ಳುತ್ತದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಗುತ್ತಿಗೆ ಕಾರ್ಮಿಕರಿಗೆ ಸ್ಥಿರ ಉದ್ಯೋಗಗಳು, ಹಳೆಯ ಪಿಂಚಣಿ ಯೋಜನೆ (Pension Scheme) ಮತ್ತು ಸಕಾಲಿಕ ಬಡ್ತಿಗಳನ್ನು ಮರಳಿ ತರಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ – ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ
Advertisement
कांग्रेस का पक्का वादा
✅ संविदाकर्मियों को पक्की नौकरी
✅ पुरानी पेन्शन व्यवस्था (OPS) बहाल
✅ समय पर प्रमोशन
राजस्थान में लागू किया, अब गुजरात में कांग्रेस सरकार बनते ही कर्मचारियों को उनका हक़ मिलेगा। #कांग्रेस_देगी_पक्कीनौकरी
— Rahul Gandhi (@RahulGandhi) October 30, 2022
Advertisement
ಈ ಯೋಜನೆಯನ್ನು ಈಗಾಗಲೇ ರಾಜಸ್ಥಾನದಲ್ಲಿ ಜಾರಿಗೊಳಿಸಲಾಗಿದೆ. ಈಗ ಗುಜರಾತ್‍ನಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ, ತಕ್ಷಣ ನೌಕರರು ತಮ್ಮ ವೇತನವನ್ನು ಪಡೆಯಲಿದ್ದಾರೆ ಎಂದು ‘ಕಾಂಗ್ರೆಸ್ ದೇಗಿ ಪಕ್ಕಿ ನೌಕ್ರಿ’ ಹ್ಯಾಶ್‍ಟ್ಯಾಗ್ ಹಾಕಿದ್ದಾರೆ. ಇದನ್ನೂ ಓದಿ: ಯಮುನಾ ಜಲ ಶುದ್ಧವಾಗಿದೆ ಎಂದು ನಿರೂಪಿಸಲು ಅದೇ ನೀರಿನಲ್ಲಿ ಸ್ನಾನ ಮಾಡಿದ ಜಲಮಂಡಳಿ ನಿರ್ದೇಶಕ
Advertisement
Advertisement
ಇದನ್ನು ರಾಜಸ್ಥಾನದಲ್ಲಿ ಜಾರಿಗೊಳಿಸಲಾಗಿದೆ, ಈಗ ಗುಜರಾತಿನಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ನೌಕರರು ತಮ್ಮ ವೇತನವನ್ನು ಪಡೆಯುತ್ತಾರೆ ಎಂದು ರಾಹುಲ್ ಗಾಂಧಿ ಅವರು ‘ಕಾಂಗ್ರೆಸ್ ದೇಗಿ ಪಕ್ಕಿ ನೌಕ್ರಿ’ ಹ್ಯಾಶ್‍ಟ್ಯಾಗ್ ಬಳಸಿ ಹೇಳಿದ್ದಾರೆ.