ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಯಾವುದೇ ಕ್ಷೇತ್ರದಿಂದ ಕಣಕ್ಕೆ ಇಳಿದರೂ ನಾವು ಅವರನ್ನು ಸೋಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನ ಕೋರಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೈಸೂರು ದಸರಾದಲ್ಲಿ ಇಂದು ಭಾಗವಹಿಸಲು ಆಗಿಲ್ಲ. ಆದರೆ ಇದೇ ತಿಂಗಳ 14, 16 ಹಾಗೂ 19ರಂದು ಮೂರುದಿನ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ. ಕಾಂಗ್ರೆಸ್ ಹಾಗೂ ಜೆಡಿಎಸ್‍ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಣೆ ನೀಡಿದರು. ಇದನ್ನು ಓದಿ: ದಸರಾ ಉದ್ಘಾಟನಾ ಸಮಾರಂಭದಲ್ಲೂ ದೋಸ್ತಿ ಪಕ್ಷದ ಮುನಿಸು ಬಹಿರಂಗ!
Advertisement
Advertisement
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಅಸಮಾಧಾನ ಕುರಿತು ಪ್ರತಿಕ್ರಿಯೆ ನೀಡಿದ ಡಿಸಿಎಂ, ಈ ಬಗ್ಗೆ ನನಗೆ ಮಾಹಿತಿಯಿಲ್ಲ. ಆದರೆ ನಾಯಕರಲ್ಲಿ ಸ್ಥಳೀಯವಾಗಿ ಸಣ್ಣ ಪುಟ್ಟ ಅಸಮಾಧಾನ ಇರುತ್ತದೆ. ವಿಶ್ವ ವಿಖ್ಯಾತ ದಸರಾವು ಅತ್ಯಂತ ದೊಡ್ಡ ಹಬ್ಬವಾಗಿದ್ದು, ನಾಯಕರ ಮಧ್ಯೆ ಅಸಮಾಧಾನ ಉಂಟಾಗುವುದು ಸ್ವಾಭಾವಿಕ ಎಂದು ತಿಳಿಸಿದರು. ಇದನ್ನು ಓದಿ: ಅವ್ರ ದರ್ಬಾರ್ ದಸರಾದಲ್ಲಿ ನಡಿಲಿ: ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಪುಟ್ಟರಂಗಶೆಟ್ಟಿ ಕಿಡಿ
Advertisement
https://youtu.be/EwABHrgayaE
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv