ನವದೆಹಲಿ: ಇದೇ ತಿಂಗಳ 22ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರ (Ram Mandir) ಉದ್ಘಾಟನಾ ಸಮಾರಂಭದಿಂದ ಕಾಂಗ್ರೆಸ್ ಪಕ್ಷ ದೂರ ಉಳಿಯುವ ನಿರ್ಧಾರ ಮಾಡಿದೆ. ಈ ನಿರ್ಧಾರವನ್ನು ಕಾಂಗ್ರೆಸ್‍ನ (Congress) ಅಧಿಕೃತ ಹೇಳಿಕೆಯ ಮೂಲಕ ತಿಳಿಸಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್, ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯಾ ಗಾಂಧಿ (Sonia Gandhi) ಮತ್ತು ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಬಂದಿತ್ತು. ಆದರೆ ಗೌರವ ಪೂರ್ವಕವಾಗಿ ಕಾಂಗ್ರೆಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಅಯೋಧ್ಯೆಗೆ ತಲುಪಿತು 2,400 ಕೆ.ಜಿಯ ದೇಶದ ಅತೀ ದೊಡ್ಡ ಘಂಟೆ
Advertisement
ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ವಿಷಯವಾಗಿದ್ದು, ಆರ್‍ಎಸ್‍ಎಸ್ ಮತ್ತು ಬಿಜೆಪಿ ಅಯೋಧ್ಯೆಯಲ್ಲಿ ಮಂದಿರವನ್ನು ರಾಜಕೀಯಕ್ಕಾಗಿ ಹಿಂದಿನಿಂದಲೂ ಬಳಕೆ ಮಾಡುತ್ತಿದೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆ ಚುನಾವಣಾ ಲಾಭಕ್ಕಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ಹೆಳಿಕೊಂಡಿದೆ.
Advertisement
Advertisement
2019ರ ಸುಪ್ರೀಂ ಕೋರ್ಟ್ ತೀರ್ಪಿಗೆ ನಾವು ಬದ್ಧವಾಗಿದ್ದೇವೆ ಮತ್ತು ಭಗವಾನ್ ರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುತ್ತೇವೆ. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕ್ರಮಕ್ಕೆ ಆಹ್ವಾನವನ್ನು ಗೌರವಯುತವಾಗಿ ನಿರಾಕರಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Advertisement
ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರುವ ಕಾಂಗ್ರೆಸ್ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವಿಶ್ವ ಹಿಂದೂ ಪರಿಷತ್, ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ಪಕ್ಷವು ಬಯಸದಿದ್ದರೆ ಅದು ಅವರ ಆಯ್ಕೆಯಾಗಿದೆ. ನಾವು ಆಹ್ವಾನವನ್ನು ಕಳುಹಿಸಿದ್ದೇವೆ, ಅವರು ಬರಲು ಬಯಸದಿದ್ದರೆ ಪರವಾಗಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: 8 ಕೆಜಿ ಬೆಳ್ಳಿ ಪಾದುಕೆ ಹೊತ್ತು 7,200 km ಪಾದಯಾತ್ರೆ – 64ರ ವೃದ್ಧನ ಭಕ್ತಿಗೆ ರಾಮನ ಭಕ್ತರಿಂದ ಮೆಚ್ಚುಗೆ