ಹುಬ್ಬಳ್ಳಿ: ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ನಿಂತಿದೆ. ಆರು ತಿಂಗಳಲ್ಲೇ ಭ್ರಷ್ಟಾಚಾರ (Corruption) ತಾಂಡವವಾಡುತ್ತಿದೆ. ಕಾಂಗ್ರೆಸ್ (Congress) ನಾಯಕರು ಬಿಜೆಪಿಗೆ 40% ಸರ್ಕಾರ ಎನ್ನುತ್ತಿದ್ದರು. ಆದರೆ ಕಾಂಗ್ರೆಸ್ ಪರಿಸ್ಥಿತಿ ಬರೀ ಆರು ತಿಂಗಳಲ್ಲಿ ಭೀಕರವಾಗಿದೆ. ನೆಲ ಕಚ್ಚುವ ಪರಿಸ್ಥಿತಿ ತಲುಪಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಭಾರತ ಸರ್ಕಾರದ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಲು ಅನುಮತಿ ಕೊಡುತ್ತಿಲ್ಲ. ಮೇಲಿನಿಂದ ಹೇಳಿದ್ದಾರೆ, ಅದಕ್ಕೆ ಪೆಂಡಿಂಗ್ ಅಂತ ಅಧಿಕಾರಿಗಳು ನೆಪ ಹೇಳುತ್ತಿದ್ದಾರೆ. ಮೇಲಿನಿಂದ ಅಂದರೆ ಯಾರು? ಯಾಕೆ ದುಡ್ಡು ಕೊಡುತ್ತಿಲ್ಲ ಎಂಬ ಬಗ್ಗೆ ಪರಿಶೀಲನೆ ಮಾಡಿ ಗುತ್ತಿಗೆದಾರರಿಗೆ ಹಣ ನೀಡಲಿ ಎಂದರು. ಇನ್ನೂ ಡಿಕೆ ಶಿವಕುಮಾರ್ (DK Shivakumar) ಮುನ್ನಡೆ ಅಥವಾ ಹಿನ್ನಡೆ ಅದು ಅವರಿಗೆ ಬಿಟ್ಟ ವಿಚಾರ. ಇದರ ಅರ್ಥ ಕೋರ್ಟ್ ಒಪ್ಪಿದೆ ಅಂತಲ್ಲಾ. ಆದರೆ ತನಿಖೆ ಮುಂದುವರೆಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ರಿಪೇರಿ ಮಾಡಲಾರದಷ್ಟು ಹದಗೆಟ್ಟಿದೆ, ವಿಜಯೇಂದ್ರ ಸರಿ ಮಾಡೋಕಾಗಲ್ಲ: ಶೆಟ್ಟರ್ ವಾಗ್ದಾಳಿ
Advertisement
Advertisement
ಬೆಳೆ ವಿಮೆ ಭಾರತ ಸರ್ಕಾರದ್ದು. ಆದರೆ ಬೆಳೆ ವಿಮೆ ಏಜೆನ್ಸಿ, ಪರಿಹಾರದ ಪ್ರಮಾಣ, ಎಲ್ಲವನ್ನೂ ನಿರ್ಧಾರ ಮಾಡುವುದು ರಾಜ್ಯ ಸರ್ಕಾರ. ಹೀಗಾಗಿ ತಪ್ಪಾಗಿದೆ. ಅದನ್ನು ಮರು ಪರಿಶೀಲನೆ ಮಾಡುತ್ತೇವೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿ ಮೊದಲಿನಿಂದಲೂ ಚಿಂತನೆಯಿದೆ. ಈಗ 324 ಕೋಟಿ ರೂ. ಯೋಜನೆಯ ಪ್ಲಾನ್ ಸಿದ್ಧವಾಗಿದೆ. ಇದಕ್ಕೆ ಅನುಮೋದನೆ ಪಡೆದು ಟೆಂಡರ್ ಕರೆಯಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ತಂದೆ-ತಾಯಿಯನ್ನು ಸಾಕುವವರೇ ಹೆಣ್ಣು ಮಕ್ಕಳು: ಭ್ರೂಣಹತ್ಯೆ ವಿರುದ್ಧ ಎಂಬಿ ಪಾಟೀಲ್ ಕಿಡಿ
Advertisement