– ಹೈಕಮಾಂಡ್ ಹೇಳಿದವರಿಗೆ ಸಿಎಂ ಸ್ಥಾನ ಎಂದ ಎಐಸಿಸಿ ಅಧ್ಯಕ್ಷ
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ (Karnataka Assembly Election) ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಪಕ್ಷ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಬಲಿಷ್ಠವಾಗಿದ್ದು, ಪಕ್ಷದ ಬಲ ಹೆಚ್ಚಿಸಿಕೊಳ್ಳಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರ ಸೇರಿದಂತೆ ಪಕ್ಷದ ಹಿರಿಯ ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಗೆಲ್ಲುವ ಅಭ್ಯರ್ಥಿಗಳ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಹುದ್ದೆಯನ್ನು ಹೈಕಮಾಂಡ್ (High Command) ನಿರ್ಧರಿಸಲಿದೆ ಎಂದರು. ಇದನ್ನೂ ಓದಿ: ಶಕ್ತಿದೇವತೆ ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಟಿಕೆಟ್ ಫೈಟ್ ಜೋರು
Advertisement
Advertisement
ಬಿಜೆಪಿ (BJP) ಸರ್ಕಾರದ ಭ್ರಷ್ಟಾಚಾರವನ್ನು (Corruption) ಎತ್ತಿಹಿಡಿಯಲು ಕಾಂಗ್ರೆಸ್ ಶತಪ್ರಯತ್ನ ಮಾಡುತ್ತಿದೆ. ನಮ್ಮ ಕಾರ್ಯಕರ್ತರು ಎಲ್ಲಾ ಬೂತ್‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಗೆಲ್ಲುವ ಎಲ್ಲಾ ಸಾಧ್ಯತೆಗಳಿವೆ. ಈ ಕಾರಣಕ್ಕಾಗಿಯೇ ಪ್ರಧಾನಿ ಹಾಗೂ ಗೃಹಸಚಿವರು ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿ ಅತ್ತೆ-ಸೊಸೆ ಮಧ್ಯೆ ಜಗಳ ತಂದಿಡುತ್ತಿದೆ- ಸಿ.ಎಂ ಇಬ್ರಾಹಿಂ
Advertisement
ಕರ್ನಾಟಕ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದ ಹಿಂದೆ ಇಷ್ಟೊಂದು ಜನ ಸೇರಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಖಂಡಿತವಾಗಿಯೂ ಗೆಲ್ಲುತ್ತದೆ. ಅಲ್ಲದೇ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಅನೇಕ ಹಿರಿಯರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಚುನಾವಣೆಯಲ್ಲಿ ಪಕ್ಷವು ಎಷ್ಟು ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಎಂಬುದನ್ನು ಕಾಂಗ್ರೆಸ್ ಮುಖ್ಯಸ್ಥರು ಘೋಷಿಸಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಶಾಸಕ ಶಾಮನೂರು ಕೊಟ್ಟ ಗಿಫ್ಟನ್ನು ರಸ್ತೆಗೆ ಎಸೆದು ಮಹಿಳೆಯರ ಆಕ್ರೋಶ
ಚುನಾವಣೆ ಗೆದ್ದ ಬಳಿಕ ಶಾಸಕರ ಅಭಿಪ್ರಾಯವನ್ನು ಪಡೆದುಕೊಂಡು ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಯನ್ನು ಯಾರಿಗೆ ನೀಡಬೇಕೆಂದು ನಿರ್ಧರಿಸುತ್ತದೆ. ಇಂತಿಷ್ಟೇ ಸೀಟುಗಳನ್ನು ಗೆಲ್ಲುತ್ತದೆ ಎಂಬುದನ್ನು ನಿಖರವಾಗಿ ಹೇಳಲು ನನಗೆ ಸಾಧ್ಯವಿಲ್ಲ. ಆದರೆ ಪಕ್ಷ ಗೆಲ್ಲುತ್ತದೆ ಎಂಬುವುದನ್ನು ಹೇಳಬಲ್ಲೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಬೇಕೆಂಬುದು ನನ್ನ ಆಸೆ: ವರ್ತೂರು ಪ್ರಕಾಶ್