– ಪ್ರಜ್ವಲ್ ರೇವಣ್ಣ ಸೋಲನ್ನು ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು
ಹಾಸನ: 25 ವರ್ಷಗಳ ಬಳಿಕ ಹಾಸನ ಲೋಕಸಭಾ ಕ್ಷೇತ್ರ (Hassan Lok Sabha Constituency) ಕಾಂಗ್ರೆಸ್ ತೆಕ್ಕೆಗೆ ವಾಲಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ (Shreyas Patel) ಮಣಿಸಿದ್ದಾರೆ.
ಪೆನ್‌ಡ್ರೈವ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಅವರೀಗ ಸಂಸದ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಶ್ರೇಯಸ್ ಸೋಲಿಸುವ ಮೂಲಕ ಶ್ರೇಯಸ್ ಹೊಸ ಇತಿಹಾಸ ಬರೆದಿದ್ದಾರೆ. ಇಡೀ ಹಾಸನ ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಶ್ರೇಯಸ್ ಗೆಲುವನ್ನು ಕೊಂಡಾಡಿದ್ದಾರೆ. ಶ್ರೇಯಸ್ ಅವರನ್ನು ಹೊತ್ತುಕೊಂಡು ಮೆರವಣಿಗೆ ನಡೆಸಿದರಲ್ಲದೇ, ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದ್ದಾರೆ.
ಪ್ರತಿ ಸುತ್ತಿನಲ್ಲೂ ಮತಗಳ ಅಂತರ ಹೆಚ್ಚಿಸಿಕೊಳ್ಳುತ್ತಲೇ ಇದ್ದ ಶ್ರೇಯಸ್ ಪಟೇಲ್ ಅಂತಿಮವಾಗಿ 6,32,090 ಮತಗಳನ್ನು ಪಡೆದುಕೊಳ್ಳುವ ಮೂಲಕ 42,261 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಇನ್ನೂ 5,89,829 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. 8,098 ನೋಟಾ ಮತಗಳು ಚಲಾವಣೆಯಾಗಿವೆ. ಇದನ್ನೂ ಓದಿ: ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿಗೆ ಗೆಲುವು- ಉತ್ತರ ಕನ್ನಡದಲ್ಲಿ ಸಂಭ್ರಮಾಚರಣೆ
1999ರಲ್ಲಿ ಹೆಚ್.ಡಿ ದೇವೇಗೌಡರಿಂದ ಸೋತಿದ್ದ ಪುಟ್ಟಸ್ವಾಮಿ ಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ಎರಡೂವರೆ ದಶಕಗಳ ಬಳಿಕ ದೇವೇಗೌಡರ ಮೊಮ್ಮಗ ಪ್ರಜ್ವಲ್‌ನನ್ನ ಸೋಲಿಸಿದ್ದಾರೆ.
ಇನ್ನೂ ಮಗನ ಗೆಲುವಿನ ಸಂತಸವನ್ನು ಪಬ್ಲಿಕ್ ಟಿ.ವಿಯೊಂದಿಗೆ ಹಂಚಿಕೊಂಡ ಶ್ರೇಯಸ್ ಪಟೇಲ್ ತಾಯಿ ಅನುಪಮಾ, ಇದು ನಮ್ಮ ಗೆಲುವಲ್ಲ ಮತದಾರರ ಗೆಲುವು. ನಮಗೆ ಎಲ್ಲಾ ಪಕ್ಷದ ಕಾರ್ಯಕರ್ತರು ಪಕ್ಷಾತೀತವಾಗಿ ಬೆಂಬಲ ನೀಡಿದ್ದಾರೆ. ಹಾಸನ ಜಿಲ್ಲೆ ಮತದಾರರಿಗೆ ಹಾಗೂ ಎಲ್ಲ ಪಕ್ಷಗಳ ನಾಯಕರಿಗೆ ಧನ್ಯವಾದ ಹೇಳುತ್ತೇನೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಜಯದ ಮಾಲೆ
ಬಿಜೆಪಿ ಕಾರ್ಯಕರ್ತರಿಂದಲೂ ಸಂಭ್ರಮ:
ಹಾಸನದಲ್ಲಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪ್ರಜ್ವಲ್ ರೇವಣ್ಣ ಅವರ ಸೋಲನ್ನು ಸಂಭ್ರಮಿಸಿದ್ದಾರೆ. ಹಾಸನ ನಗರದ ಡೈರಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.