ಹಾವೇರಿ: ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮುಖಭಂಗವಾಗಿದೆ. ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿಜಯಗಳಿಸಿದೆ.
13ನೇ ಸುತ್ತು ಮುಕ್ತಾಯಕ್ಕೆ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 59,985 ಮತಗಳನ್ನು ಪಡೆದರೆ ಬಿಜೆಪಿಯ ಶಿವರಾಜ್ ಸಜ್ಜನರ 52,922 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ನ ನಿಯಾಜ್ ಶೇಖ್ 629 ಮತಗಳನ್ನು ಗಳಿಸಿದ್ದಾರೆ. ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಬೇಕಿದೆ. ಇದನ್ನೂ ಓದಿ: ಹಾನಗಲ್ ಉಪ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
7063 ಮತಗಳ ಮುನ್ನಡೆಯನ್ನು ಪಡೆದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ತೊಡಗಿದ್ದಾರೆ. ಕಾಂಗ್ರೆಸ್‌ಗೆ ಮುನ್ನಡೆ ಸಿಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ತೆರಳಿದರು. ಇದನ್ನೂ ಓದಿ: ಮೊದಲೇ ಪೈಪೋಟಿ ನಿರೀಕ್ಷಿಸಿದ್ದೆವು, ಫಲಿತಾಂಶಕ್ಕೆ ಸಮಯವಿದೆ: ಬೊಮ್ಮಾಯಿ
ಬಿಜೆಪಿಯ ಶಾಸಕ ಸಿಎಂ ಉದಾಸಿ ಅವರ ಅಕಾಲಿಕ ನಿಧನದಿಂಧ ತೆರವಾದ ಕ್ಷೇತ್ರಕ್ಕೆ ಕಳೆದ ಶನಿವಾರ ಮತದಾನ ನಡೆದಿತ್ತು. ಈಗ ಬಿಜೆಪಿ ತೆಕ್ಕೆಯಲ್ಲಿದ್ದ ಕ್ಷೇತ್ರವನ್ನು ಕಾಂಗ್ರೆಸ್ ಪಡೆದುಕೊಂಡಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ ಮಾನೆ, ಹಾನಗಲ್‌ನಲ್ಲಿ ಜನಬಲ ಗೆದ್ದಿದೆ. ಹಣ ಬಲ ಸೋತಿದೆ. ಮತ ಹಾಕಿದ ಜನರಿಗೆ ಸಾಷ್ಟಾಂಗ ನಮಸ್ಕಾರ ಸಲ್ಲಿಸುವೆ. ನಮ್ಮ ನಾಯಕರ ಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರ ಮಣಿಸಿದ್ದಾರೆ. ಜನರು ಸರ್ಕಾರದ ಜನವಿರೋಧಿ ನೀತಿ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಇನ್ನಾದರೂ ಜನರ ಕಲ್ಯಾಣ ಮಾಡಲಿ. ಆಡಳಿಯ ಯಂತ್ರ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಳಿ ನಡೆಸಿದರು.