ಹಾವೇರಿ: ಮೂರೂ ಉಪಚುನಾವಣೆಯಲ್ಲಿ ಕಾಂಗ್ರೆಸ್ (Congress) ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಶಿಗ್ಗಾಂವಿ (Shiggaon) ಕ್ಷೇತ್ರದ ಜನರಿಗೆ ಕೃತಜ್ಞತಾ ಸಮಾವೇಶವನ್ನ ಆಯೋಜನೆ ಮಾಡಲಾಗಿದೆ.
ಭಾನುವಾರ ಸಂಜೆ 4 ಗಂಟೆಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕು ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ, ಸಚಿವ ಹೆಚ್‌ಕೆ ಪಾಟೀಲ್ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ್ ಕುಮಾರ್ ನೀರಲಗಿ ಹೇಳಿದ್ದಾರೆ. ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಗುರಿ: ಶೈಲೇಂದ್ರ ಬೆಲ್ದಾಳೆ
ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ. ಕ್ಷೇತ್ರದ ಜನರು ಭಾಗವಹಿಸುಂತೆ ಶಾಸಕರು ಹಾಗೂ ಮುಖಂಡರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟದಲ್ಲಿ ಬಿರುಕು – ನಾಯಕತ್ವ ಬದಲಾವಣೆಗೆ ಆಂತರಿಕ ಕಲಹ