ಶಿವಮೊಗ್ಗ: 30 ವರ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮ ಪಂಚಾಯ್ತಿ ಕಾಂಗ್ರೆಸ್ (Congress) ತೆಕ್ಕೆಗೆ ಸೇರಿದೆ.
ಗ್ರಾಮ ಪಂಚಾಯ್ತಿಯ ಒಟ್ಟು 16 ಸದಸ್ಯರ ಬಲ ಹೊಂದಿದೆ. ಒಟ್ಟು 16 ಸದಸ್ಯರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 8 ಸದಸ್ಯರ ಸಮಬಲ ಹೊಂದಿದ್ದವು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 14 ಸದಸ್ಯರು ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಪಕ್ಷವು ಗ್ರಾಮ ಪಂಚಾಯತ್ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತು. ಇದನ್ನೂ ಓದಿ: ಪುಟ್ಗೋಸಿ ಕರೆಂಟ್‍ಗೆ ಸಿಎಂ, ಡಿಸಿಎಂ ಕಾಂಪಿಟೇಷನ್ ಮೇಲೆ ಅಧಿಕಾರಿಗಳನ್ನು ಕಳುಹಿಸಿದ್ರು: ಹೆಚ್‍ಡಿಕೆ
Advertisement
Advertisement
ಅಧ್ಯಕ್ಷರಾಗಿ ಮಂಜಮ್ಮ ಜ್ಞಾನೇಶ್ ಹಾಗೂ ಉಪಾಧ್ಯಕ್ಷರಾಗಿ ಕುಮಾರ್ ನಾಯ್ಕ ಆಯ್ಕೆಯಾದರು. ಇದರಿಂದಾಗಿ ಸ್ಥಳೀಯ ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಅವರಿಗೆ ಹಿನ್ನಡೆಯಾಗಿದೆ. ಇದನ್ನೂ ಓದಿ: ಕುಮಾರಸ್ವಾಮಿ ಜೊತೆ ದತ್ತಮಾಲೆ ಧರಿಸಲಿದ್ದಾರೆ ಜೆಡಿಎಸ್ ಶಾಸಕರು