ನವದೆಹಲಿ: ಎಎಪಿ ಪ್ರಣಾಳಿಕೆ (AAp Manifesto) ಬಳಸಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣಾ (Karnataka Election Result 2023) ಫಲಿತಾಂಶ ವಿಚಾರವನ್ನು ಪ್ರಸ್ತಾಪಿಸಿದರು. ಆಪ್ ಪ್ರಣಾಳಿಕೆಯಲ್ಲಿ ನಾವು ಬಳಸಿದ್ದ ಅಂಶಗಳನ್ನು ಅವರು ಬಳಸಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರದ ಗದ್ದುಗೆ ಏರಿದೆ ಎಂದಿದ್ದಾರೆ.
Advertisement
Advertisement
ನಾವು ಉಚಿತ ವಿದ್ಯುತ್, ಪಡಿತರ, ಮಹಿಳೆಯರಿಗೆ ಹಾಗೂ ಯುವಕರಿಗೆ ಮಾಸಿಕ ಭತ್ಯೆ ನೀಡುತ್ತೇವೆ ಎಂದು ಹೇಳಿದ್ದೆವು. ಇದನ್ನೇ ಕಾಂಗ್ರೆಸ್ ಪಕ್ಷದವರು ಬಳಸಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ನಟ ಆದಿತ್ಯ ಸಿಂಗ್ ರಜಪೂತ್ ಮನೆಯ ಬಾತ್‌ರೂಮಿನಲ್ಲಿ ಶತವವಾಗಿ ಪತ್ತೆ
Advertisement
ಬೇರೆ ಪಕ್ಷಗಳು ಶಿಕ್ಷಣ ಹಾಗೂ ಆರೋಗ್ಯದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತವೆ. ಆದರೆ ಆಪ್ ಪಕ್ಷ ರಾಷ್ಟ್ರ ರಾಜಕಾರಣದ ದಿಕ್ಕನ್ನು ಬದಲಿಸುವ ಪ್ರಯತ್ನದಲ್ಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನಿಸಿದರೆ ಕಾಂಗ್ರೆಸ್ ಪಕ್ಷ ನಮ್ಮ ಪ್ರಣಾಳಿಕೆಯಲ್ಲಿ ಗೆದ್ದಿದೆ ಎಂದು ಲೇವಡಿ ಮಾಡಿದ್ದಾರೆ.
Advertisement
ಮೇ 10ರಂದು ನಡೆದಿದ್ದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಸರ್ಕಾರ ರಚನೆ ಮಾಡಿದೆ. ಮೇ 20ರಂದು ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಸೇರಿದಂತೆ 8ಮಂದಿ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.