ಶಿವಮೊಗ್ಗ: ಕಾಂಗ್ರೆಸ್ (Congress) ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿಯ (Bhadravati) ಅನ್ವರ್ ಕಾಲೋನಿಯಲ್ಲಿ ನಡೆದಿದೆ.
ನಗರದ ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ. ಅಂಗಡಿಗೆ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ.
ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ಎರಡು ಕೈಗಳು ತುಂಡಾಗುವ ಹಂತಕ್ಕೆ ತಲುಪಿವೆ. ಗಂಭೀರವಾಗಿ ಗಾಯಗೊಂಡಿದ್ದ ಆತನಿಗೆ ಭದ್ರಾವತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ – 7 ಚಾಲಕರ ಡಿಎಲ್ ರದ್ದಿಗೆ ಪೊಲೀಸರಿಂದ ಆರ್‌ಟಿಒಗೆ ಪತ್ರ
ಇಸ್ಪೀಟ್ ಹಾಗೂ ಇತರ ಗಲಾಟೆ ಹಿನ್ನೆಲೆ ಹಳೆಯ ದ್ವೇಷದಿಂದ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಭದ್ರಾವತಿ ಓಲ್ಡ್ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಈಜಲು ಹಳ್ಳಕ್ಕೆ ಇಳಿದ ಸಹೋದರರಿಬ್ಬರು ನೀರುಪಾಲು – ಪೋಷಕರ ಆಕ್ರಂದನ
