ಮಡಿಕೇರಿ: ನಾನು ಕಾಂಗ್ರೆಸ್ ಕಾರ್ಯಕರ್ತ. ಮಾಜಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದಿದ್ದರು. ಈ ರೀತಿ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಹಾಗಾಗಿ ನಾನು ಅವರ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದು ಮೊಟ್ಟೆ ಎಸೆದ ಸಂಪತ್ ಸ್ಪಷ್ಟನೆ ನೀಡಿದ್ದಾರೆ.
Advertisement
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಕಾರ್ಯಕರ್ತ. ಈ ಹಿಂದೆ ಜೆಡಿಎಸ್ ಕಾರ್ಯಕರ್ತನಾಗಿದ್ದೆ. ಮಾಜಿ ಸಚಿವ ಜೀವಿಜಯ ಅವರ ಅಭಿಮಾನಿ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದೇನೆ. ಈ ಹಿಂದೆ ಸಿದ್ದರಾಮಯ್ಯ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ ಟಿಪ್ಪು ವಿಷಯದಲ್ಲಿ ಕೊಡಗಿನ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಇದು ನನಗೆ ಇಷ್ಟವಾಗಿಲ್ಲ ಹಾಗಾಗಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಅಪ್ಪಚ್ಚು ರಂಜನ್ ಆಪ್ತ!
Advertisement
Advertisement
ನಾನು ಸೋಮವಾರಪೇಟೆ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಆದರೆ ಪಕ್ಷ ಹೊರತುಪಡಿಸಿ ಮೊದಲು ನಾನೊಬ್ಬ ಹಿಂದೂ. ಸಿದ್ದರಾಮಯ್ಯ ಹಿಂದೂಗಳ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಜೊತೆಗೆ ಅಪ್ಪಚ್ಚು ರಂಜನ್ ಅವರೊಂದಿಗೆ ಫೋಟೋ ವೈರಲ್ ವಿಚಾರವಾಗಿ ಮಾತನಾಡಿ, ಯಾವುದೋ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಫೋಟೋ ತೆಗೆದುಕೊಂಡಿದ್ದೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿಗರೇ – ಅಪ್ಪಚ್ಚು ರಂಜನ್
Advertisement
ಆಗಸ್ಟ್ 18 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರ ಕಾರನ್ನು ಅಡ್ಡಗಟ್ಟಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದ್ದರು. ಅಲ್ಲದೇ ಇದೇ ವೇಳೆ ವ್ಯಕ್ತಿಯೊಬ್ಬ ಕಾರಿಗೆ ಮೊಟ್ಟೆ ಎಸೆದಿದ್ದ.