– ಅಸ್ಸಾಂನ ಗುವಾಹಟಿಯಲ್ಲಿ ಪರಿಸ್ಥಿತಿ ಉದ್ವಿಗ್ನ
ದಿಸ್ಪುರ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯು ಮಂಗಳವಾರ ಮೇಘಾಲಯದ ಬಳಿಕ ಅಸ್ಸಾಂಗೆ ಮರುಪ್ರವೇಶಿಸಿದೆ.
ಈ ವೇಳೆ ಗುವಾಹಟಿಯ ಒಳ ರಸ್ತೆಗಳ ಮೂಲಕ ತೆರಳಲು ಅಸ್ಸಾಂ ಸರ್ಕಾರ (Assam Government) ಅನುಮತಿ ನಿರಾಕರಿಸಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು (Congress workers) ಹಾಗೂ ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ.
Advertisement
Advertisement
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರವು ಯಾತ್ರೆ ಅಸ್ಸಾಂ (Assam) ಪ್ರವೇಶಿಸದಂತೆ ನಿರ್ಬಂಧ ವಿಧಿಸಿತ್ತು. ಇದರ ಹೊರತಾಗಿಯೂ ಯಾತ್ರೆ ಬೈಪಾಸ್ ರಸ್ತೆ ಮೂಲಕ ಗುವಾಹಟಿ (Guwahati) ಪ್ರವೇಶಿಲು ಮುಂದಾದಾಗ ಮುಖಾಮುಖಿಯಾಗಿ ಘರ್ಷಣೆ ಸಂಭವಿಸಿದೆ. ಪೊಲೀಸರು ಯಾತ್ರೆಯನ್ನು ತಡೆದಿದ್ದರಿಂದ ರೊಚ್ಚಿಗೆದ್ದ ಕೈ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನ ಮುರಿದು ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: ರಾಮಲಲ್ಲಾನಿಗೆ 11 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಗುಜರಾತ್ ವ್ಯಾಪಾರಿ!
Advertisement
Advertisement
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬಜರಂಗದಳ, ಬಿಜೆಪಿ ನೇತೃತ್ವದ ರ‍್ಯಾಲಿಗಳನ್ನು ಇದೇ ಮಾರ್ಗವಾಗಿ ಕೊಂಡೊಯ್ಯಲಾಯಿತು. ಆದ್ರೆ ನಾವು ಕಾನೂನು ಉಲ್ಲಂಘಿಸುವುದಿಲ್ಲ ಅಂತ ಹೇಳಿದರೂ ನಮ್ಮನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಅಸ್ಸಾಂ ಸರ್ಕಾರವು ಯಾತ್ರೆಗೆ ಅನಗತ್ಯ ಅಡೆತಡೆಗಳನ್ನು ಸೃಷ್ಟಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!
ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆ ನಡೆಯುತ್ತಿದ್ದ ವೇಳೆಯೂ ಸಹ ಭಾರತ್ ಜೋಡೊ ಯಾತ್ರೆ ಅಸ್ಸಾಂ ಪ್ರವೇಶಿಸದಂತೆ ತಡೆಹಿಡಿಯಲಾಗಿತ್ತು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ದೇಗುಲ ಪ್ರವೇಶಿಸುವುದನ್ನೂ ಪೊಲೀಸರು ತಡೆಹಿಡಿದಿದ್ದರು. ಇದನ್ನೂ ಓದಿ: ಚೀನಾದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪನ – ದೆಹಲಿಯಲ್ಲೂ ಕಂಪಿಸಿದ ಭೂಮಿ, ಬೆಚ್ಚಿಬಿದ್ದ ಜನ