ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ (Guarantee Panel) ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ಆರೋಪಿಸಿದ್ದಾರೆ.
“ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡಲು ರಾಜ್ಯಪಾಲರಿಗೆ ಮನವಿ”
ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರುಗಳ ನಿಯೋಗದೊಂದಿಗೆ ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಗ್ಯಾರಂಟಿ ಅನುಷ್ಠಾನ ಮಾಡುವ… pic.twitter.com/vtfKDlJhL6
— Vijayendra Yediyurappa (@BYVijayendra) March 12, 2025
ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಬಿಜೆಪಿ- ಜೆಡಿಎಸ್ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ಕಾಂಗ್ರೆಸ್ ಸರ್ಕಾರದ ಅಸಾಂವಿಧಾನಿಕ ನಡೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.
ರಾಜ್ಯದ ಜನರ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ. ಈ ಸರ್ಕಾರಕ್ಕೆ ತಿಳಿಹೇಳುವ ಕೆಲಸ ಮಾಡುವಂತೆ ಹಾಗೂ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಲಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ನನ್ನ ವಿಧಾನಸಭಾ ಕ್ಷೇತ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಶಾಲೆ ಮತ್ತು ಕಾಲೇಜುಗಳ ಉಸ್ತುವಾರಿ ಸಮಿತಿಗಳಿಗೆ ಶಿಕಾರಿಪುರ ತಾಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಕೊಟ್ಟ ಹೆಸರನ್ನು ಪರಿಗಣಿಸಲು ಸೂಚಿಸಿದ್ದಾರೆ. ಇಂಥ ಕೆಲಸ ಬೇರೆ ಕಡೆಯೂ ನಡೆಯುತ್ತಿದೆ. ಈ ಸಂಬಂಧ ಸದನದಲ್ಲಿ ಹಕ್ಕುಚ್ಯುತಿಯನ್ನು ಮಂಡಿಸಲಿದ್ದೇವೆ. ಸಚಿವರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿದ್ದಾರೆ.