ಚಿಕ್ಕಮಗಳೂರು: ಕಾಂಗ್ರೆಸ್ (Congress) ಕಾರ್ಯಕರ್ತ ಹಾಗೂ ಗ್ರಾಪಂ ಸದಸ್ಯ ಗಣೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಆರೋಪಿಗಳಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಡಿ.5ರ ರಾತ್ರಿ 10:30ರ ವೇಳೆ ಸಖರಾಯಪಟ್ಟಣ (Sakarayapattana) ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಕಲ್ಮುರುಡೇಶ್ಚರ ಮಠದ ಬಳಿ ಮತ್ತೆ ಗಲಾಟೆ ನಡೆದಿತ್ತು. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು (Chikkamagaluru) ಎಸ್ಪಿ ವಿಕ್ರಂ ಅಮಟೆ ನಾಲ್ಕು ತಂಡ ರಚಿಸಿ ತನಿಖೆಗೆ ಸೂಚಿಸಿದ್ದರು. ಇದನ್ನೂ ಓದಿ: 2 ಗುಂಪುಗಳ ಮಧ್ಯೆ ಮಾರಾಮಾರಿ – ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಈ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಮೂವರಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಅಜಯ್, ನಿಥಿನ್ ಅಲಿಯಾಸ್ ಸೈನ್ಸ್, ದರ್ಶನ್ ಅಲಿಯಾಸ್ ಜಪಾನ್‌ಗಾಗಿ ಶೋಧ ನಡೆಯುತ್ತಿದೆ.
ಸಖರಾಯಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶನಿವಾರ (ಡಿ.6) 100 ಪೊಲೀಸರು, ಒಂದು ಕೆ.ಎಸ್.ಆರ್.ಪಿ ತುಕಡಿ ನಿಯೋಜಿಸಲಾಗಿತ್ತು. ಇಂದು (ಡಿ.7) ಮತ್ತೆ ಸಖರಾಯಪಟ್ಟಣದಲ್ಲಿ 80 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬಾಳೆಹೊನ್ನೂರಲ್ಲಿ ಕಾಡಾನೆ ದಾಳಿ – ಕಾರ್ಮಿಕನ ಸ್ಥಿತಿ ಗಂಭೀರ

