ಹಾವೇರಿ: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಆರೋಪದಿಂದ ಮುಕ್ತರಾಗಿ ಬರಲೆಂದು ಹಾವೇರಿ (Haveri) ಜಿಲ್ಲೆ ಶಿಗ್ಗಾವಿ ಪಟ್ಟಣದಲ್ಲಿ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ನೇತೃತ್ವದಲ್ಲಿ ನೂರಾರು ಬೆಂಬಲಿಗರು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿಸಲು ಪ್ರತಿಪಕ್ಷಗಳು ಷಡ್ಯಂತ್ರ ನಡೆಸಿವೆ. ಬಿಜೆಪಿ (BJP) ಹಾಗೂ ಜೆಡಿಎಸ್ (JDS) ನಾಯಕರು ಒಂದಾಗಿ ಷಡ್ಯಂತ್ರ ನಡೆಸಿದ್ದಾರೆ. ಅವರ ಜೊತೆ ನಾವಿದ್ದೇವೆ ಎಂದು ಸಂದೇಶ ರವಾನೆ ಮಾಡಲು ಬೃಹತ್ ಪಾದಯಾತ್ರೆ ನಡೆಸಿದರು. ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ನೇತೃತ್ವದಲ್ಲಿ ನೂರಾರು ಬೆಂಬಲಿಗರು ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಿಂದ ಶಿಗ್ಗಾವಿ ಪಟ್ಟಣದವರೆಗೆ ಪಾದಯಾತ್ರೆ ನಡೆಸಿದರು. ಇದನ್ನೂ ಓದಿ: 18 ವರ್ಷಗಳ ಬಳಿಕ ವಿರಾಜಪೇಟೆ ಪುರಸಭೆ ಅಧಿಕಾರ ಹಿಡಿದ ಕಾಂಗ್ರೆಸ್
ಸಿಎಂ ಭ್ರಷ್ಟಾಚಾರ ರಹಿತ ಸ್ವಚ್ಛ ಆಡಳಿತ ನಡೆಸಿದ್ದಾರೆ. ಅವರು ಸಿಎಂ ಹುದ್ದೆಯಲ್ಲಿ ಇರುವುದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿ ಬಿಜೆಪಿ ಜೆಡಿಎಸ್ ಷಡ್ಯಂತ್ರ ಮಾಡುತ್ತಿವೆ ಎಂದು ಖಾದ್ರಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ