ಡಿಕೆಶಿ ಎಚ್ಚರಿಕೆಗೆ ಕ್ಯಾರೇ ಅನ್ನದ ಯುವ ಕಾರ್ಯಕರ್ತರು – ಈಗಲೂ ರಾರಾಜಿಸುತ್ತಿವೆ ಬ್ಯಾನರ್‌ಗಳು

Public TV
2 Min Read
Congress workers put up banners at night despite DK Shivakumars warning

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ಎಚ್ಚರಿಕೆ ನೀಡಿದರೂ ಯುವ ಕಾಂಗ್ರೆಸ್‌ (Youth Congress) ನಾಯಕರ ಬ್ಯಾನರ್‌ಗಳು (Congress Banner) ಸಿಲಿಕಾನ್‌ ಸಿಟಿಯಲ್ಲಿ ರಾರಾಜಿಸುತ್ತಿವೆ.

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ಗೌಡ (Manjunath Gowda) ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಅರಮನೆ ಮೈದಾನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಯುವ ಸಂಕಲ್ಪ ಕಾರ್ಯಕ್ರಮ ಸಂಬಂಧ ನಗರದ ಹಲವೆಡೆ ಬ್ಯಾನರ್‌ ಹಾಕಲಾಗಿದೆ.

ಕಾರ್ಯಕ್ರಮಕ್ಕಾಗಿ ಅರಮನೆ ಮೈದಾನ ಸುತ್ತಮುತ್ತ ಅನಧಿಕೃತವಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಕಟ್ಟಿದ್ದಾರೆ. ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಡಿಸಿಎಂ ಆಕ್ರೋಶ ಹೊರ ಹಾಕಿದ್ದರು. ಅಷ್ಟೇ ಅಲ್ಲದೇ ಇಂದು ಬೆಳಗ್ಗೆ ಒಳಗೆ ಬ್ಯಾನರ್ ತೆರವು ಮಾಡುವಂತೆ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಆಟವಾಡಲು ಕೆರೆಗೆ ಇಳಿದು ಉಸಿರು ಚೆಲ್ಲಿದ ಬಾಲಕಿ

ಎಚ್ಚರಿಕೆ ಬೆನ್ನಲ್ಲೇ ಕೆಲವು ಕಡೆ ಮಾತ್ರ ಯುವ ಕಾರ್ಯಕರ್ತರು ಬ್ಯಾನರ್ ತೆರವು ಮಾಡಿದ್ದಾರೆ. ಆದರೆ ಮೇಖ್ರಿ ಸರ್ಕಲ್, ಅರಮನೆ ಮೈದಾನ ರಸ್ತೆಯಲ್ಲಿ ಬ್ಯಾನರ್ ಗಳು ಈಗಲೂ ರಾರಾಜಿಸುತ್ತಿದೆ. ಡಿಸಿಎಂ ವಾರ್ನಿಂಗ್ ಬಳಿಕವು ರಾತ್ರಿ ಅನೇಕ ಕಡೆ ಯುವ ಕಾರ್ಯಕರ್ತರು ಬ್ಯಾನರ್ ಕಟ್ಟುತ್ತಿರುವುದು ಪಬ್ಲಿಕ್‌ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಡಿಕೆಶಿ ಹೇಳಿದ್ದೇನು?
ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಿದ್ದೇನೆ. ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿರುವವರು ತಾವಾಗಿಯೇ ತೆಗೆಯಬೇಕು, ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ. ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್‌ಗಳಲ್ಲಿ ಪ್ರದರ್ಶಿಸಬೇಕೇ ಹೊರತು, ಈ ರೀತಿ ಬ್ಯಾನರ್, ಫ್ಲೆಕ್ಸ್ ಹಾಕಿಸಿ ಅಲ್ಲ ಎಂದು ಹೇಳಿದ್ದರು.

Share This Article