ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಕನ್ನಡಿಗ ನವೀನ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭೇಟಿ ನೀಡಿದ್ದಾರೆ.
Advertisement
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರೋ ನಿವಾಸಕ್ಕೆ ಭೇಟಿ ನೀಡಿ, ನವೀನ್ ಭಾವಚಿತ್ರಕ್ಕೆ ಹೂಮಾಲೆ ಹಾಕಿ ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ಕುಟುಂಬಸ್ಥರಿಗೆ ಸಲೀಂ 1 ಲಕ್ಷ ರೂ. ಚೆಕ್ ವಿತರಿಸಿದರು. ಈ ವೇಳೆ ನವೀನ್ ಪಾರ್ಥೀವ ಶರೀರ ತರಬೇಕೆಂಬುದು ಕುಟುಂಬಸ್ಥರು ಸಲೀಂ ಮುಂದೆ ಆಗ್ರಹಿಸಿದರು. ಇದನ್ನೂ ಓದಿ: ಮೃತ ನವೀನ್ ಕುಟುಂಬಕ್ಕೆ ಸಾಂತ್ವನ ಹೇಳಿ 25 ಲಕ್ಷ ರೂ. ಚೆಕ್ ಕೊಟ್ಟ ಸಿಎಂ
Advertisement
Advertisement
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ, ಆದಷ್ಟು ಬೇಗ ಸರ್ಕಾರ ನವೀನ್ ಪಾರ್ಥಿವ ಶರೀರ ತರುವ ಕೆಲಸ ಮಾಡಬೇಕು. ಮೃತದೇಹ ತರುವುದರ ಜೊತೆಗೆ ಉಕ್ರೇನ್ ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಮಾಡಬೇಕು. ನವೀನ್ ಸಾವು ಸಾಕಷ್ಟು ದುಃಖ ತಂದಿದೆ. ನಮ್ಮಲ್ಲಿನ ಶಿಕ್ಷಣ ವ್ಯವಸ್ಥೆ ಬದಲಾಗಬೇಕು. ನವೀನ್ ಸಾವು ರಾಜ್ಯಕ್ಕೆ ಒಂದು ಸಂದೇಶ ಕೊಟ್ಟಿದೆ ಎಂದು ಹೇಳಿದರು.