ಕಾಂಗ್ರೆಸ್‌ನವ್ರು ಹಣ, ಹೆಂಡ ಹಂಚಿ ಚುನಾವಣೆ ಗೆಲ್ಲಬಹುದೆಂಬ ಭ್ರಮೆಯಲ್ಲಿದ್ದಾರೆ: ಬಿಎಸ್‌ವೈ

ಶಿವಮೊಗ್ಗ: ಕಾಂಗ್ರೆಸ್ ಪಕ್ಷವು ಹಣ, ಹೆಂಡ ಹಂಚಿ ಮುಂಬರುವ ವಿಧಾನಸಭಾ ಚುನಾವಣೆ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.
ವಿಧಾನ ಪರಿಷತ್‌ಗೆ ಆಯ್ಕೆಯಾದ ಡಿ.ಎಸ್.ಅರುಣ್ ಅವರನ್ನು ಅಭಿನಂದಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಪರಿಷತ್ ಚುನಾವಣೆಯಲ್ಲಿ ೧೫ ಸ್ಥಾನ ಗೆಲ್ಲುವ ವಿಶ್ವಾಸ ಇತ್ತು. ಆದರೆ ೧೧ ಸ್ಥಾನ ಗೆದ್ದಿದ್ದೇವೆ. ಮೈಸೂರು, ತುಮಕೂರಿನಲ್ಲಿ ಕಡಿಮೆ ಅಂತರದಲ್ಲಿ ಸೋಲು ಅನುಭವಿಸಬೇಕಾಯ್ತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಬೇಕಿದೆ ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಉಪಯೋಗಿ ಅಲ್ಲ, ನಿರುಪಯೋಗಿ: ಮೋದಿ ಬಣ್ಣನೆಗೆ ಅಖಿಲೇಶ್ ಯಾದವ್ ಲೇವಡಿ
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೇಲೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಾರೆ ಅಂದುಕೊAಡಿದ್ದರು. ಆದರೆ ನಾನು ಆ ರೀತಿ ಮಾಡದೇ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತೆ ರಾಜ್ಯ ಪ್ರವಾಸ ಮಾಡುವ ಮೂಲಕ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ವಿಧಾನಸಭಾ ಅಧಿವೇಶನ ನಡೆಯುತ್ತಿದ್ದು, ಎಲ್ಲವನ್ನು ಗಮನಿಸುತ್ತಿದ್ದೇನೆ. ಕಾಂಗ್ರೆಸ್‌ನವರು ಹಣ, ಹೆಂಡ ಹಂಚಿ ಚುನಾವಣೆ ಗೆಲ್ಲಬಹುದು ಅಂದುಕೊAಡಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂಬ ವಿಶ್ವಾಸವನ್ನು ಜನರಲ್ಲಿ ಮೂಡಿಸೋಣ ಎಂದು ಕರೆ ನೀಡಿದರು. ಇದನ್ನೂ ಓದಿ: 100 ಕೋಟಿ ರೂ. ಮೌಲ್ಯದ ಒತ್ತುವರಿ ತೆರವು ಮಾಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ!