ನವದೆಹಲಿ: ಕಾಂಗ್ರೆಸ್‌ನ (Congress) ಇಂದೋರ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ (Akshay Kanti Bamb) ಅವರು ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನ ಇಂದು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಈ ಮೂಲಕ ಕೈ ಪಾಳಯಕ್ಕೆ ಶಾಕ್ ನೀಡಿದ್ದಾರೆ.
ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ (Kailash Vijayvargiya) ಅವರು ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಂಡು ‘ಪಕ್ಷಕ್ಕೆ ಸ್ವಾಗತ’ ಎಂದು ಬರೆದ ನಂತರ ಈ ಬೆಳವಣಿಗೆಯನ್ನು ಖಚಿತಪಡಿಸಲಾಗಿದೆ.
इंदौर से कांग्रेस के लोकसभा प्रत्याशी श्री अक्षय कांति बम जी का माननीय प्रधानमंत्री श्री @narendramodi जी, राष्ट्रीय अध्यक्ष श्री @JPNadda जी, मुख्यमंत्री @DrMohanYadav51 जी व प्रदेश अध्यक्ष श्री @vdsharmabjp जी के नेतृत्व में भाजपा में स्वागत है। pic.twitter.com/1isbdLXphb
— Kailash Vijayvargiya (Modi Ka Parivar) (@KailashOnline) April 29, 2024
ವಿಜಯವರ್ಗಿಯ ಅವರು ಫೋಟೋದೊಂದಿಗೆ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ರಾಜ್ಯಾಧ್ಯಕ್ಷ ವಿಡಿ ಶರ್ಮಾ ನೇತೃತ್ವದಲ್ಲಿ ಇಂದೋರ್‌ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರನ್ನು ಬಿಜೆಪಿಗೆ ಸ್ವಾಗತಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ- ಮೋದಿಗೆ ಪ್ರಿಯಾಂಕಾ ಪ್ರಶ್ನೆ
ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಮೇ 13 ರಂದು ಮತದಾನ ನಡೆಯಲಿದೆ. ಇಲ್ಲಿ ಹಾಲಿ ಬಿಜೆಪಿ ಸಂಸದ ಶಂಕರ್ ಲಾಲ್ವಾನಿ ವಿರುದ್ಧ ಅಕ್ಷಯ್ ಕಾಂತಿಯವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು.
ಶುಕ್ರವಾರ ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಡಿಯ ಸೊರೊ ಶಾಸಕ ಪರಶುರಾಮ್ ಧಾಡಾ ಬಿಜೆಪಿಗೆ ಮರಳಿದರು. ವಾರಗಳ ಹಿಂದೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ ಏಪ್ರಿಲ್ 27 ರಂದು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಿಖ್ಖರು ಬಿಜೆಪಿಗೆ ಸೇರ್ಪಡೆಗೊಂಡರು.