PMO ಅಧಿಕಾರಿಯೆಂದು Z Plus ಸೆಕ್ಯೂರಿಟಿ ಪಡೆದು ಶ್ರೀನಗರದಲ್ಲಿ ಓಡಾಡಿದ್ದ ವಂಚಕ ಅರೆಸ್ಟ್

Public TV
2 Min Read
Gujarat Conman Poses As PMO Official In Srinagar

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಪ್ರಧಾನಮಂತ್ರಿ ಕಾರ್ಯಾಲಯದ ಹಿರಿಯ ಅಧಿಕಾರಿ ( PMO Official) ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ಗುಜರಾತ್‍ನ ವಂಚಕನೊಬ್ಬ ಪೊಲೀಸರು ಬಂಧಿಸಿದ್ದಾರೆ.

ವಂಚಕನನ್ನು ಕಿರಣ್ ಭಾಯ್ ಪಟೇಲ್ ಎಂದು ಗುರುತಿಸಲಾಗಿದೆ. ಕಿರಣ್ ಭಾಯ್ ಪಟೇಲ್ ಈ ವರ್ಷದ ಆರಂಭದಲ್ಲಿ ಶ್ರೀನಗರಕ್ಕೆ ( Srinagar) 2 ಬಾರಿ ಭೇಟಿ ನೀಡಿದ್ದ. ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದ. ಅಷ್ಟೇ ಅಲ್ಲದೇ ಝಡ್ ಪ್ಲಸ್ ಭದ್ರತೆ ( Z-plus security), ಬುಲೆಟ್ ಪ್ರೂಫ್ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ, ಪಂಚತಾರಾ ಹೋಟೆಲ್‍ನಲ್ಲಿ ಅಧಿಕೃತ ವಸತಿ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಂಡಿದ್ದ.

Gujarat Conman Poses As PMO Official In Srinagar 1

ಪ್ರಧಾನಿ ಕಾರ್ಯಾಲಯದಲ್ಲಿ ಕಾರ್ಯತಂತ್ರ ಮತ್ತು ಪ್ರಚಾರಕ್ಕಾಗಿ ಹೆಚ್ಚುವರಿ ನಿರ್ದೇಶಕರಂತೆ ನಾಟಕ ಮಾಡುತ್ತಿದ್ದ. ಅಷ್ಟೇ ಅಲ್ಲದೇ ಜಮ್ಮು ಕಾಶ್ಮೀರದ ವಿವಿಧೆಡೆಯಲ್ಲಿ ಭದ್ರತಾ ಪಡೆ ಹಾಗೂ ಪೊಲೀಸರ ಬೆಂಗಾವಲಿನಲ್ಲಿ ವಿವಿಧೆಡೆ ಸಂಚರಿಸಿದ್ದ. ದೂಧಪತ್ರಿಯನ್ನು ಪ್ರವಾಸೋದ್ಯಮ ತಾಣವನ್ನಾಗಿ ಮಾಡುವ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದ. ಆದರೆ ಈ ಸಂಬಂಧ ಪೊಲೀಸರು ಅನುಮಾನಗೊಂಡಿದ್ದಾರೆ. ಅಷ್ಟೇ ಅಲ್ಲದೇ ಗುಪ್ತಚರ ಸಂಸ್ಥೆಯು ಜೆಕೆ ಪೊಲೀಸರಿಗೆ ಎಚ್ಚರಿಕೆ ನೀಡಿದೆ ಎಂದು ಮೂಲಗಳ ತಿಳಿಸಿವೆ. ಇದನ್ನೂ ಓದಿ: ನಾನು ಕನಸು, ಮನಸ್ಸಿನಲ್ಲಿಯೂ ಜಾತಿ ರಾಜಕಾರಣ ಮಾಡಿಲ್ಲ: ಸಿ.ಟಿ ರವಿ

ಈ ಹಿನ್ನೆಲೆಯಲ್ಲಿ ಆತನನ್ನು ಪರಿಶೀಲಿಸಿದ ಪೊಲೀಸರು ಶ್ರೀನಗರದ ಹೋಟೆಲ್‍ನಲ್ಲಿ ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರ ತಂಡವೂ ತನಿಖೆಗೆ ಸಹಾಯ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಿರಣ್ ಪಟೇಲ್ 10 ದಿನಗಳ ಹಿಂದೆಯೇ ಬಂಧಿಸಲಾಗಿದ್ದು, ಅದನ್ನು ಪೊಲೀಸರು ರಹಸ್ಯವಾಗಿಟ್ಟಿದ್ದರು. ಆದರೆ ನ್ಯಾಯಾಂಗ ಬಂಧನ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

Gujarat Conman Poses As PMO Official In Srinagar 2

ಕಿರಣ್ ಪಟೇಲ್‍ನ ಟ್ವಿಟ್ಟರ್‌ನಲ್ಲಿ ಬಿಜೆಪಿ ಗುಜರಾತ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ಸಿನ್ಹ್ ವಘೇಲಾ ಸೇರಿದಂತೆ ಸಾವಿರಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾನೆ. ಅಷ್ಟೇ ಅಲ್ಲದೇ ವರ್ಜೀನಿಯಾದ ಕಾಮನ್‍ವೆಲ್ತ್ ವಿವಿಯಿಂದ ಪಿಹೆಚ್‍ಡಿ, ಐಐಎಂ ತಿರುಚ್ಚಿಯಿಂದ ಎಂಬಿಎ ಮತ್ತು ಬಿ.ಇ ಕಂಪ್ಯೂಟರ್ ಎಂಜಿನಿಯರ್ ಎಂದು ಬರೆದುಕೊಂಡಿದ್ದಾನೆ.

ನಕಲಿ ಅಧಿಕಾರಿಯನ್ನು ಪತ್ತೆ ಹಚ್ಚುವಲ್ಲಿ ವಿಫಲರಾದ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನನ್ನ ಆಡು ಭಾಷೆ, ನನ್ನ ಸಂಸ್ಕೃತಿ, ನನ್ನ ಹೋರಾಟ ನನ್ನ ಕ್ಷೇತ್ರದ ಜನರಿಗೆ ಗೊತ್ತಿದೆ: ಶಿವಲಿಂಗೇಗೌಡ

Share This Article
Leave a Comment

Leave a Reply

Your email address will not be published. Required fields are marked *