ನವದೆಹಲಿ: ಪ್ರಸುತ್ತ ತಿಂಗಳು ಕಾವೇರಿಯಿಂದ (Cauvery) ತಮಿಳುನಾಡಿಗೆ (Tamil Nadu) 56.73 ಟಿಎಂಸಿ ನೀರು ಹರಿಸಬೇಕಿತ್ತು. ಸದ್ಯ 153.802 ಟಿಎಂಸಿ ನೀರು ಹರಿಸಲಾಗಿದ್ದು, ಬಿಳಿಗುಂಡ್ಲುವಿನಲ್ಲಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವನ್ನು ಮುಂಬರುವ ತಿಂಗಳುಗಳಲ್ಲಿ ಕರ್ನಾಟಕ (Karnataka) ರಾಜ್ಯವು ಹರಿಸಬೇಕಾದ ನೀರಿನ ಮೊತ್ತಕ್ಕೆ ಜಮೆ ಮಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWRC) ಮನವಿ ಮಾಡಿದೆ.
ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿರುವ ರಾಜ್ಯದ ಪರ ಅಧಿಕಾರಿಗಳು ಮುಂದಿನ ಮಾನ್ಸೂನ್ ತಿಂಗಳುಗಳಲ್ಲಿಯೂ ಸಹ ಒಳ್ಳೆಯ ಮಳೆಯ ನಿರೀಕ್ಷೆ ಇದ್ದು, ಎರಡೂ ರಾಜ್ಯದ ರೈತರು ಸಹ ಲಾಭ ಪಡೆದುಕೊಳ್ಳಬಹುದೆಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ. ಹೆಚ್ಚುವರಿ ನೀರಿನ ಹರಿವಿನ ಲೆಕ್ಕವನ್ನು ಪರಿಗಣಿಸಬೇಕು ಎಂದು ಕರ್ನಾಟಕ ಒತ್ತಾಯಿಸಿದೆ. ಇದನ್ನೂ ಓದಿ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತಮಿಳುನಾಡು ಪರ ಅಧಿಕಾರಿಗಳು, ಬಿಳಿಗುಂಡ್ಲುವಿನಲ್ಲಿ ಹರಿದ ನೀರಿನ ಪ್ರಮಾಣವು ಕರ್ನಾಟಕದ ಜಲಾಶಯಗಳಲ್ಲಿನ ಹೆಚ್ಚುವರಿ ನೀರಿನ ಪ್ರಮಾಣವಾಗಿರುತ್ತದೆ. ಈ ಬಾರಿಯೂ ಸಹ ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ತುಂಬಿದ ನಂತರವಷ್ಟೇ ನೀರನ್ನು ಹರಿಸಿರುತ್ತದೆ ಎಂದರು. ಇದನ್ನೂ ಓದಿ: ಸಿಎಂ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು: ಕೆ.ಹೆಚ್ ಮುನಿಯಪ್ಪ
ಕಾವೇರಿ ನ್ಯಾಯಾಧಿಕರಣದ ಆದೇಶದಂತೆ ಒಂದು ವಾರದಲ್ಲಿ ಹರಿಸಬೇಕಾದ ನೀರಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಅದನ್ನು ಮುಂಬರುವ ವಾರಗಳಲ್ಲಿ ಹರಿಸತಕ್ಕದ್ದು. ಆದ್ದರಿಂದ, ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ಭರ್ತಿ ಆಗುವವರೆಗೆ ನಿರೀಕ್ಷಿಸಿ ಹೆಚ್ಚುವರಿ ನೀರನ್ನು ಹರಿಸಲು ಕಾಯುವ ಹಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು. ಉತ್ತಮ ಮಳೆಯಿಂದ ನೀರು ಹರಿಯುತ್ತಿರುವ ಹಿನ್ನಲೆ ಅಂತಿಮವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕ ರಾಜ್ಯಕ್ಕೆ ನೀರು ಹರಿಸುವ ಸಂಬಂಧ ಯಾವುದೇ ರೀತಿಯ ನಿರ್ಣಯಗಳು/ಆದೇಶಗಳು ನೀಡಿಲ್ಲ. ಇದನ್ನೂ ಓದಿ: ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!