-ನಮ್ಮವರು ವಿರೋಧ ಮಾಡಿದ್ದು ನನಗೆ ಅನುಕೂಲವಾಗಿದೆ
ಬೆಳಗಾವಿ: ಯಾರಿಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಲಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದೆ. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಲಿದೆ ಎಂದು ಪ್ರಧಾನಿ ಮೋದಿ (Narendra Modi), ಜೆ.ಪಿ ನಡ್ಡಾ ಹಾಗೂ ಅಮಿತ್ ಶಾ ಎಲ್ಲಿಯೂ ಹೇಳಿಲ್ಲ. ಈ ಸುದ್ದಿಗಳು ಊಹಾಪೋಹ ಎನಿಸುತ್ತದೆ. ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದ್ದು, ಆಗ ಸತ್ಯ ಹೊರಬರುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ. ಟಿಕೆಟ್ ಕೇಳುವುದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ನಮ್ಮ ಕೇಂದ್ರ ಚುನಾವಣಾ ಮಂಡಳಿಯಿದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು? ಏಕೆ ಕೊಡಬೇಕು? ಅದರಿಂದಾಗುವ ಲಾಭಗಳ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ, 10 ವರ್ಷಗಳ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತಿವಿ: ಶೋಭಾ ಕರಂದಾಜ್ಲೆ
Advertisement
Advertisement
ಟಿಕೆಟ್ ತಪ್ಪಿಸಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೀತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗ ವಿರೋಧ ವ್ಯಕ್ತವಾಗುತ್ತದೆಯೋ, ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲವಾಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳ್ತಾರೆ. ಶೋಭಾಗೆ ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನನ್ನು ಮಾಡಬಾರದು ಎಂಬುದು ಇಂಥ ವರದಿ ಪಡೆಯುವುದರಿಂದ ಗೊತ್ತಾಗುತ್ತದೆ ಎಂದಿದ್ದಾರೆ.
Advertisement
ಚುನಾವಣಾ (General Elections 2024 )ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗುವುದಿಲ್ಲ. ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ. ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ – ಕಲಬುರಗಿಗೆ ಆಗಮಿಸಿದ ಎನ್‌ಐಎ ತಂಡ