ಹೈದರಾಬಾದ್: ದೇಶದಲ್ಲಿ ಮುಂಗಾರು ಮಳೆಯ ಅಬ್ಬರದ ಮಧ್ಯೆ ಮೇಘಸ್ಫೋಟದ ವಿಚಾರವಾಗಿ ತೆಲಂಗಾಣದ ಸಿಎಂ ಕೆ.ಚಂದ್ರಶೇಖರ ರಾವ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಕುಂಭದ್ರೋಣ ಮಳೆಯ ಹಿಂದೆ ಯಾವುದೋ ಷಡ್ಯಂತ್ರ ಇದೆ ಎನ್ನಲಾಗುತ್ತಿದೆ. ಕೆಲ ವಿದೇಶಿ ಶಕ್ತಿಗಳು ಬೇಕಂತಲೇ ನಮ್ಮ ದೇಶದ ಕೆಲವು ಭಾಗಗಳಲ್ಲಿ ಮೇಘ ಸ್ಫೋಟ ಮಾಡ್ತಿದ್ದಾರೆ ಎಂದು ಅವರು ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಲೇಬೇಕು – ರಾಜ್ಯ ಸರ್ಕಾರದಿಂದ ಖಡಕ್ ಆದೇಶ
ಭದ್ರಾಚಲಂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಅವರು, ವಿದೇಶಿ ಶಕ್ತಿಗಳು ಉದ್ದೇಶ ಪೂರ್ವಕವಾಗಿಯೇ ಆಯ್ದ ಕೆಲವು ಪ್ರದೇಶಗಳಲ್ಲಿ ಮೇಘಸ್ಫೋಟ ಮಾಡುತ್ತಿವೆ. ಆದ್ರೆ ಇದು ಎಷ್ಟರ ಮಟ್ಟಿಗೆ ಸತ್ಯವೋ ಗೊತ್ತಿಲ್ಲ. ಈ ಹಿಂದೆ ಕಾಶ್ಮೀರ, ಲೇಹ್, ಲಡಾಖ್ ಹಾಗೂ ಉತ್ತರಾಖಂಡದಲ್ಲಿ ಈ ರೀತಿ ಆಗಿತ್ತು. ಈಗ ಇಂತಹ ಸಂಚು ಗೋದಾವರಿ ಪ್ರಾಂತ್ಯದಲ್ಲಿ ನಡೆಯುತ್ತಿದೆ ಎಂದು ಕೆಲವು ವರದಿಗಳು ಹೇಳಿವೆ ಎಂದಿದ್ದಾರೆ. ಇದನ್ನೂ ಓದಿ: ಅಯೂಬ್‌ಖಾನ್ ಹತ್ಯೆ – ಎಫ್‌ಬಿಯಲ್ಲಿ ಬಿಲ್ಡಪ್ ಕೊಟ್ಟಿದ್ದ ಆರೋಪಿ ಮತೀನ್ ಖಾನ್ ಬಂಧನ
ಅಲ್ಲದೆ ಗೋದಾವರಿ ನದಿಗೆ ಶಾಂತಿ ಪೂಜೆ ಮಾಡಿಸಿದ್ದಾರೆ. ಕೆಸಿಆರ್ ಹೇಳಿಕೆಯನ್ನು ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಮಾತನಾಡುತ್ತಾ, ಇದು ಶತಮಾನದ ದೊಡ್ಡ ಜೋಕ್ ಎಂದು ವ್ಯಂಗ್ಯವಾಡಿದ್ದಾರೆ.