ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು (Police Constable) ಹಠಾತ್ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ.
ಚಿಂತಾಮಣಿ ನಗರದ ವೆಂಕಟಗಿರಿಕೋಟೆ ಕಾಲೋನಿ ನಿವಾಸಿ ಐರಾಜು (40) ಮೃತ ಪೇದೆ. ಐರಾಜು ರಾತ್ರಿ ಕರ್ತವ್ಯ ಮುಗಿಸಿಕೊಂಡು ಚಿಂತಾಮಣಿಯ ತಮ್ಮ ಮನೆಗೆ ವಾಪಸ್ ಆಗಿದ್ದರು. ಇಂದು ಮುಂಜಾನೆ ಸುಮಾರು 5:30ರ ವೇಳೆಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಐರಾಜು ಅವರು ಪತ್ನಿ ಹಾಗೂ ಮೂವರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇದನ್ನೂ ಓದಿ: ಈಜಲು ಹೋಗಿದ್ದ ಬಾಲಕ ಕೆರೆಯಲ್ಲಿ ಮುಳುಗಿ ಸಾವು
ಕರ್ತವ್ಯನಿಷ್ಠ ಪೊಲೀಸ್ ಪೇದೆಯ ಅಕಾಲಿಕ ನಿಧನಕ್ಕೆ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಚಿಂತಾಮಣಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಐರಾಜು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪೊಲೀಸ್ ಇಲಾಖೆಯ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: RSS ಆಕ್ಟೋಪಸ್ ಥರ, ಅದು ಎಲ್ಲೆಲ್ಲೂ ಇದೆ: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

