ಬಾಗಲಕೋಟೆ: ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ (Police Constable) ಚಿಕಿತ್ಸೆ ಫಲಿಸದೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಾಗಲಕೋಟೆ(Bagalkote) ಜಿಲ್ಲೆಯ ರಬಕವಿ-ಬನಹಟ್ಟಿ(Rabakavi Banahatti) ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೌರಿಶಂಕರ್ ಬಿರಾದಾರ (40) ಮೃತಪಟ್ಟ ದುರ್ದೈವಿ ಕಾನ್ಸ್‌ಟೇಬಲ್.
ಕಳೆದ ಕೆಲವು ದಿನಗಳಿಂದ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಇದನ್ನೂ ಓದಿ: ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಕೊಲೆ
