ಕಾರವಾರ: ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕನ್ನಡದ ಜನರಿಂದ ‘ನೋ ಹಾಸ್ಪಿಟಲ್ ನೋ ವೋಟು’ ಅಭಿಯಾನ ಜೋರಾಗಿದ್ದು ಆರೋಗ್ಯ ಸಚಿವ ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಿಳಾ ಸಬಲೀಕರಣ ನನ್ನ ಮೊದಲ ಆದ್ಯತೆ – ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು
ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಶ್ರೀ @BSBommai ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ.
2/3
— Dr Sudhakar K (@mla_sudhakar) July 25, 2022
ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತು ಸಿಎಂ ಜೊತೆ ಚರ್ಚಿಸೋದಾಗಿ ಭರವಸೆ ಕೊಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
3/3
— Dr Sudhakar K (@mla_sudhakar) July 25, 2022
ಶಿರೂರು ಆ್ಯಂಬುಲೆನ್ಸ್ ದುರಂತ ಪ್ರಕರಣದ ಬಳಿಕ ಉತ್ತರ ಕನ್ನಡ ಜನರು ‘ನೋ ಹಾಸ್ಪಿಟಲ್ ನೋ ವೋಟು’ ಅಭಿಯಾನ ತೀವ್ರಗೊಳಿಸಿದ್ದಾರೆ. ದಶಕಗಳಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯ ಕೇಳಿಬರುತ್ತಿದೆ. ಇದನ್ನೂ ಓದಿ: ಆಸ್ಪತ್ರೆಗಾಗಿ ಟ್ಟಿಟ್ಟರ್ ಅಭಿಯಾನ – ದೇಶದ 35 ಟಾಪ್ ಹ್ಯಾಷ್‌ಟ್ಯಾಗ್‌ನಡಿ ಟ್ರೆಂಡಿಂಗ್
ಹೀಗಾಗಿ 2019ರಲ್ಲಿ ಮೊದಲ ಬಾರಿಗೆ ಟ್ವಿಟ್ಟರ್ ಅಭಿಯಾನ ಹಮ್ಮಿಕೊಂಡಾಗ ಅಂದಿನ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರೂ ಯಾವುದೇ ಕಾರ್ಯಗಳು ಆಗಿರಲಿಲ್ಲ. ಈ ನಡುವೆ ಇತ್ತೀಚಿಗೆ ಶಿರೂರು ಟೋಲ್ ಗೇಟಿನಲ್ಲಿ ನಡೆದ ಆಂಬ್ಯುಲೆನ್ಸ್ ಅಪಘಾತದಲ್ಲಿ ಜಿಲ್ಲೆಯ ನಾಲ್ವರು ದುರ್ಮರಣ ಹೊಂದಿದ್ದರು. ಈ ಪ್ರಕರಣದ ಬಳಿಕ ಮತ್ತೆ ಆಸ್ಪತ್ರೆಗಾಗಿ ಕೂಗು ಹೆಚ್ಚಾಗಿದ್ದು, ಹಂತಹಂತವಾಗಿ ಪ್ರತಿಭಟನೆಗಳನ್ನ ಹಮ್ಮಿಕೊಳ್ಳಲು ವಿವಿಧ ಸಂಘಟನೆಗಳು ಸಜ್ಜಾಗಿವೆ.