ಬೆಳಗಾವಿ: ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ಅರಮನೆ ನಿರ್ಮಾಣಕ್ಕೆ ಮುಂದಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Advertisement
ಕಿತ್ತೂರು ಕೋಟೆ ನಿರ್ಮಾಣವನ್ನು ಕಿತ್ತೂರು ಪಟ್ಟಣದಲ್ಲಿರುವ ಚೆನ್ನಮ್ಮನ ಕೋಟೆ ಪಕ್ಕದಲ್ಲೇ ಅರಮನೆ ನಿರ್ಮಾಣ ಮಾಡುವಂತೆ ಸ್ಥಳೀಯರು ಈ ಹಿಂದೆಯೇ ಬೇಡಿಕೆ ಇಟ್ಟಿದ್ದರು. ಆದರೆ ಈಗ ಬೆಳಗಾವಿ ಜಿಲ್ಲಾಡಳಿತ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ಅರಮನೆ ನಿರ್ಮಾಣಕ್ಕೆ ತಯಾರಿ ನಡೆಸಿದೆ. ಇದನ್ನೂ ಓದಿ: ಮ್ಯೂಸಿಕ್ ಶೂಟ್ ವೇಳೆ ದಾಳಿ: 8 ಮಹಿಳಾ ರೂಪದರ್ಶಿಗಳ ಮೇಲೆ ಅತ್ಯಾಚಾರ
Advertisement
Advertisement
ಬಚ್ಚನಕೇರಿ ಗ್ರಾಮದಲ್ಲಿ ಕೋಟೆಯ ಪ್ರತಿರೂಪದ ಅರಮನೆ ಮಾಡಲು ಮುಂದಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ ಅರಮನೆ ನಿರ್ಮಾಣಕ್ಕೆ ಬಚ್ಚನಕೇರಿ ಗ್ರಾಮದಲ್ಲಿರುವ 57 ಎಕರೆ ಜಾಗವನ್ನು ಮೀಸಲಿಟ್ಟಿದೆ.
Advertisement
ಅರಮನೆ ನಿರ್ಮಾಣಕ್ಕೆ ಸರ್ಕಾರಿ ಜಾಗವನ್ನು ಕಿತ್ತೂರು ಪ್ರಾಧಿಕಾರಕ್ಕೆ ನೀಡಲು ಸರ್ಕಾರ ಉದ್ದೇಶಿಸಿದೆ. ಈ ಸಂಬಂಧ ಬೈಲಹೊಂಗಲ ಉಪವಿಭಾಗಾಧಿಕಾರಿಗೆ ಬೆಳಗಾವಿ ಜಿಲ್ಲಾಡಳಿತ ಪತ್ರ ಬರೆದಿದೆ. ಈ ಸಂಬಂಧ ಆಕ್ಷೇಪಗಳಿದ್ದರೆ ಸಮರ್ಥವಾದ ಕಾರಣ ನೀಡುವಂತೆ ಕೋರಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಆದರೆ ಬಚ್ಚನಕೇರಿಯಲ್ಲಿ ಅರಮನೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಫೈನಲ್ ತಲುಪಿದ ಕನ್ನಡಿಗ, ಈಜುಪಟು ಶ್ರೀಹರಿ ನಟರಾಜ್