ಚಾಮರಾಜನಗರ: ಮಾದಪ್ಪನ ದರ್ಶನ ಪಡೆಯಲು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ದಟ್ಟಾರಣ್ಯದಲ್ಲಿ ಕಲ್ಲುಮುಳ್ಳಿನ ಹಾದಿ ನಡುವೆಯೂ ಮಹದೇಶ್ವರನ ದರ್ಶನ ಮಾಡುತ್ತಾರೆ. ಇದನ್ನರಿತ ಅಭಿವೃದ್ಧಿ ಪ್ರಾಧಿಕಾರ ಭಕ್ತರಿಗೆ ಗುಡ್ ನ್ಯೂಸ್‍ವೊಂದನ್ನು ನೀಡುತ್ತಿದೆ.
Advertisement
ಹೌದು ರಾಜ್ಯದಲ್ಲಿರುವ ದೇಗುಲಗಳಲ್ಲಿ ಅತೀ ಹೆಚ್ಚು ಆದಾಯ ಬರುವ ಎರಡನೇ ದೇವಾಲಯ ಎಂದರೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ದೇವಸ್ಥಾನ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದು ಧನ್ಯರಾಗುತ್ತಾರೆ. ಅದರಲ್ಲೂ ದೀಪಾವಳಿ, ಶಿವರಾತ್ರಿ ಹಬ್ಬದ ವೇಳೆಯಲ್ಲಿ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸುತ್ತಾರೆ. ಈ ಸಮಯದಲ್ಲಿ ಭಕ್ತರು ಹರಕೆ ಮಾಡಿಕೊಂಡು ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಮಲೆ ಮಹದೇಶ್ವರ ದೇವಸ್ಥಾನಕ್ಕೆ ದಟ್ಟ ಕಾಡಿನ ನಡುವೆ ಕಾಲ್ನಡಿಗೆಯಲ್ಲಿ ಸಾಗುತ್ತಾರೆ. ಕಾಡಿನ ನಡುವೆ ಕೆಲವು ಕಡೆ ದುರ್ಗಮ ಹಾದಿಗಳಿವೆ. ಈ ಹಾದಿಯಲ್ಲಿ ಭಕ್ತರು ನಡೆಯಲು ಸಾಕಷ್ಟು ಪ್ರಯಾಸ ಪಡುತ್ತಿದ್ದರು. ಇದನ್ನೆಲ್ಲಾ ಗಮನಿಸಿದ ಮಲೆ ಮಹದೇಶ್ವರ ಪ್ರಾಧಿಕಾರದವರು ಕಾಡಿನ ನಡುವೆ ದುರ್ಗಮ ಹಾದಿ ಇರುವ ಕಡೆ ಮೆಟ್ಟಿಲುಗಳನ್ನು ನಿರ್ಮಾಣ ಮಾಡುವ ಕೆಲಸಕ್ಕೆ ಮುಂದಾಗಿದೆ.
Advertisement
Advertisement
ಮಲೆ ಮಹದೇಶ್ವರ ಪ್ರಾಧಿಕಾರ ಈಗಾಗಲೇ ಮೆಟ್ಟಿಲು ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿದೆ. ಅಂದಾಜು 25 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಟ್ಟಿಲುಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ತಾಳ ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೂ 7 ಕಿ.ಮೀ ಮೆಟ್ಟಿಲು ನಿರ್ಮಾಣವಾಗುತ್ತಿದೆ. ಈಗಾಗಲೇ 2 ಕಿಮೀ ನಷ್ಟು ಮೆಟ್ಟಿಲು ಮಾಡುವ ಕೆಲಸ ನಡೆದಿದೆ. ಇನ್ನೆರಡು ತಿಂಗಳಲ್ಲಿ ಮೆಟ್ಟಿಲು ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಇದನ್ನೂ ಓದಿ: 12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಿ ಫೋನ್ ಬ್ಯಾನ್? – ಭಾರತದಲ್ಲಿ ಯಾವ ಕಂಪನಿಯ ಪಾಲು ಎಷ್ಟಿದೆ?
Advertisement
ಈ ಕುರಿತಂತೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಭಕ್ತರೊಬ್ಬರು, ಈ ಕಾಡಿನಲ್ಲಿ ಮೆಟ್ಟಿಲು ನಿರ್ಮಾಣ ಮಾಡುತ್ತಿರುವುದು ಭಕ್ತರಿಗೂ ಸಂತಸ ತಂದಿದೆ. ಇಷ್ಟು ವರ್ಷ ನಾವು ಕಾಡಿನ ಹಾದಿಯಲ್ಲಿ ಕಲ್ಲು ಮುಳ್ಳುಗಳನ್ನು ಲೆಕ್ಕಿಸದೇ ನಡೆಯುತ್ತಿದ್ದೆವು. ಈ ವೇಳೆ ಕಲ್ಲು ಬಡಿದು ಕಾಲಿಗೆ ಗಾಯವಾಗಿರುವ ಉದಾಹರಣೆ ಸಹ ಇವೆ. ಸದ್ಯ ಮೆಟ್ಟಿಲು ನಿರ್ಮಾಣ ಮಾಡುತ್ತಿರುವುದರಿಂದ ಈ ಸಮಸ್ಯೆಗಳಿಗೆ ಮುಕ್ತಿ ಸಿಗುತ್ತದೆ. ನಾವು ಸಹ ಆರಾಮಾಗಿ ಕಾಡಿನ ಮಧ್ಯೆ ನಡೆದು ಹೋಗಬಹುದು ಎಂದು ಹೇಳುತ್ತಾರೆ.
ಒಟ್ಟಾರೆ ಭಕ್ತರ ಅನುಕೂಲಕ್ಕಾಗಿ ಮೆಟ್ಟಿಲು ನಿರ್ಮಾಣ ಮಾಡುತ್ತಿರುವುದು ಮಾದಪ್ಪನ ಭಕ್ತರಿಗೆ ಖುಷಿ ನೀಡಿದೆ. ಇಷ್ಟು ದಿನ ಕಾಡಿನ ದುರ್ಗಮ ಹಾದಿಯಲ್ಲಿ ನಡೆದು ಮಾದಪ್ಪನ ದರ್ಶನ ಪಡೆಯುತ್ತಿದ್ದ ಭಕ್ತರು ಇನ್ಮುಂದೆ ಕಾಡಿನ ನಡುವೆ ಸಹಾ ಸುಗಮ ಹಾದಿಯಲ್ಲಿ ಸಾಗಬಹುದಾಗಿದೆ. ಇದನ್ನೂ ಓದಿ: ಪಿಎಸ್‍ಐ ಆಯ್ತು, ಇದೀಗ ಕೆಪಿಟಿಸಿಎಲ್ ಎಕ್ಸಾಂನಲ್ಲಿ ಗೋಲ್‍ಮಾಲ್