ರಾಯಚೂರು: ಮಂತ್ರಾಲಯದ (Mantralaya) ಹೊರವಲಯದಲ್ಲಿ ಸ್ಥಾಪಿಸಲಾಗುವ ವಿಶ್ವದ ಅತಿ ಎತ್ತರದ 108 ಅಡಿಯ ಪಂಚಲೋಹ ಶ್ರೀರಾಮ ಪ್ರತಿಮೆ (Shreeram Idol) ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿಶ್ ಶಾ (Amit Shah) ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
Advertisement
ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೂಮಿ ಪೂಜೆ ಮಾಡಿ ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. ಹೈದರಾಬಾದ್ ಮೂಲದ ಜೈ ಶ್ರೀರಾಮ್ ಫೌಂಡೇಶನ್ನಿಂದ 300 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಸುಮಾರು 10 ಎಕರೆ ಪ್ರದೇಶದಲ್ಲಿ ಶ್ರೀರಾಮ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣವಾಗುತ್ತಿದೆ. ಇದನ್ನೂ ಓದಿ: ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ
Advertisement
Advertisement
ಗುಜರಾತ್ನಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ರಾಮ ಹಾಂಜಿ ಸುತಾರ್ಗೆ ಶ್ರೀರಾಮ ಪ್ರತಿಮೆ ತಯಾರಿಕೆ ಜವಾಬ್ದಾರಿ ನೀಡಲಾಗಿದೆ. ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ ವಿಶ್ವದಲ್ಲೇ ಅತಿ ಎತ್ತರದ ಶ್ರೀರಾಮ ಪ್ರತಿಮೆ ಮಂತ್ರಾಲಯದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 5 TMC ನೀರಿನ ಒಳಹರಿವು
Advertisement
Web Stories