ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಲೆಯ ಮೇಲೆ ಟ್ರಕ್ ಹರಿದು ಕಟ್ಟಡ ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರದ ಮೂಲದ ಬಾಬುಜೀ ಮಿಯಾ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಹಿಳೆ ಏನು ಧರಿಸಬೇಕು ಎಂಬುದು ಆಕೆಯ ಆಯ್ಕೆ – ನಟಿ ಕೃತಿ ಸನೋನ್‌ಗೆ ರಾಹುಲ್ ಗಾಂಧಿ ಸಾಥ್
ಮೃತ ಬಾಬುಜೀ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇಂದು ಕೆಲಸಕ್ಕಾಗಿ ಉತ್ತರಳ್ಳಿಯಿಂದ ಸರ್ಜಾಪುರದ ಕಡೆಗೆ ಹೋಗುತ್ತಿದ್ದಾಗ ಎಲೆಕ್ಟ್ರಾನಿಕ್ ಸಿಟಿ ನೈಸ್ ಟೋಲ್ ಬಳಿ ಅಪಘಾತ ಸಂಭವಿಸಿದೆ. ಇನ್ನೂ ಘಟನೆ ನಂತರ ಅಪಘಾತ ಎಸಗಿದ ಚಾಲಕ ಟ್ರಕ್ ಸಮೇತ ಎಸ್ಕೇಪ್ ಆಗಿದ್ದಾನೆ.
ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತ ದೇಹವನ್ನ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ಪತ್ನಿ ಫೋಟೋ ಸ್ಟೇಟಸ್‌ಗೆ, ಅನೈತಿಕ ಸಂಬಂಧ ಶಂಕೆ – ಕುಡುಗೋಲಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆಗೈದ ದಂಪತಿ
